ಐಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ; ಹೊಸ ರಾಜಕೀಯ ಯುಗಕ್ಕೆ ಚಾಲನೆ; Video
ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಕೋಲ್ಕತಾ: ದಶಕಗಳ ಪ್ರಯತ್ನಗಳ ಬಳಿಕ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆ ಮಾಡಿರುವ ಬಿಜೆಪಿಯ ಮೊದಲ ಸಿಎಂ ಆಗಿ ಸುವೇಂದು ಅಧಿಕಾರಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಆ ಮೂಲಕ ಪಶ್ಚಿಮ ಬಂಗಾಳದಲ್ಲಿ ರಾಜ್ಯದಲ್ಲಿ ಹೊಸ ರಾಜಕೀಯ ಯುಗಕ್ಕೆ ಚಾಲನೆ ನೀಡಿದಂತಾಗಿದೆ.
ಈ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹಿರಿಯ ಬಿಜೆಪಿ ನಾಯಕರು ಸೇರಿದಂತೆ ಗಣ್ಯ ರಾಜಕೀಯ ನಾಯಕರು ಉಪಸ್ಥಿತರಿದ್ದರು.
ಸುವೇಂದು ಅಧಿಕಾರಿ ಜೊತೆ ಇತರೆ ಐದು ಪ್ರಮುಖ ಶಾಸಕರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪಾಲ್, ಅಶೋಕ್ ಕೀರ್ತನಿಯಾ, ನಿಶಿತ್ ಪ್ರಮಾಣಿಕ್ ಮತ್ತು ಕ್ಷುದಿರಾಮ್ ತುಡು ಕೂಡ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಜನಸಾಗರ
ಶನಿವಾರ ಈ ಸಮಾರಂಭವನ್ನು ವೀಕ್ಷಿಸಲು ದೇಶದ ವಿವಿಧ ಭಾಗಗಳಿಂದ ಹಾಗೂ ವಿದೇಶಗಳಿಂದ ಸಾವಿರಾರು ಬಿಜೆಪಿ ಬೆಂಬಲಿಗರು ಕೊಲ್ಕತ್ತಾಕ್ಕೆ ಹರಿದುಬಂದರು.
ಉತ್ತರ ಬಂಗಾಳ ಮತ್ತು ನೆರೆಯ ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಿಂದಲೂ ಬೆಂಬಲಿಗರು ಆಗಮಿಸಿದ್ದರು. ಬೆಳಗ್ಗಿನಿಂದಲೇ ಬಿಜೆಪಿ ಧ್ವಜಗಳು ಮತ್ತು ಕೇಸರಿ ಬ್ಯಾನರ್‌ಗಳನ್ನು ಹಿಡಿದ ಬೆಂಬಲಿಗರ ಗುಂಪುಗಳು ನಗರದ ವಿವಿಧ ಭಾಗಗಳಲ್ಲಿ ಸೇರಿ ನಂತರ ಸಮಾರಂಭದ ಸ್ಥಳದತ್ತ ತೆರಳಿದವು.
“ಜೈ ಶ್ರೀ ರಾಮ್” ಘೋಷಣೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಸುವೇಂದು ಅಧಿಕಾರಿ ಪರ ಘೋಷಣೆಗಳು ನಗರಾದ್ಯಂತ ಮೊಳಗಿದವು. “ಇದು ಐತಿಹಾಸಿಕ ದಿನ. ಟಿಎಂಸಿಯ ಹಿಡಿತದಿಂದ ಪಶ್ಚಿಮ ಬಂಗಾಳ ಮುಕ್ತವಾಗುವುದನ್ನು ನೋಡುವುದಕ್ಕಾಗಿ ನಾವು ಬಂದಿದ್ದೇವೆ,” ಎಂದು ಜಾರ್ಖಂಡ್‌ನಿಂದ ಬಂದಿದ್ದ ಒಬ್ಬ ಬಿಜೆಪಿ ಬೆಂಬಲಿಗರು ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸುತ್ತಾ ಹೇಳಿದರು.
ಶುಕ್ರವಾರ ಪಶ್ಚಿಮ ಬಂಗಾಳ ಬಿಜೆಪಿ ವಿಧಾನಮಂಡಲ ಪಕ್ಷದ ನಾಯಕರಾಗಿ ಅಧಿಕಾರಿ ಆಯ್ಕೆಯಾಗಿದ್ದು, ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗುವ ದಾರಿಗೆ ವೇದಿಕೆ ಸಿದ್ಧವಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಮತ್ತು ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಈ ಘೋಷಣೆ ಮಾಡಿದರು.
294 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು, ತೃಣಮೂಲ ಕಾಂಗ್ರೆಸ್‌ನ 15 ವರ್ಷದ ಆಡಳಿತಕ್ಕೆ ಅಂತ್ಯ ಹಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



