ದೇಶ

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK

ತಮಿಳುನಾಡು ಮಾಜಿ DCM ಉದಯನಿಧಿ ಸ್ಟಾಲಿನ್ ನನ್ನು ರಾಜ್ಯ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ ದ್ರಾವಿಡ ಮುನ್ನೇತ್ರ ಕಳಗಂ (DMK) ಆಯ್ಕೆ ಮಾಡಲಾಗಿದೆ. 17ನೇ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಲಿದ್ದಾರೆ.

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK
ಉದಯನಿಧಿ ಸ್ಟಾಲಿನ್-ವಿಜಯ್
Published On :

ಚೆನ್ನೈ: ತಮಿಳುನಾಡು ಮಾಜಿ DCM ಉದಯನಿಧಿ ಸ್ಟಾಲಿನ್ ನನ್ನು ರಾಜ್ಯ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ ದ್ರಾವಿಡ ಮುನ್ನೇತ್ರ ಕಳಗಂ (DMK) ಆಯ್ಕೆ ಮಾಡಲಾಗಿದೆ. 17ನೇ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಲಿದ್ದಾರೆ. ಇದರ ಜೊತೆಗೆ, ಪಕ್ಷದ ಹಿರಿಯ ನಾಯಕರಾದ ಕೆ.ಎನ್. ನೆಹರು ಮತ್ತು ಇ.ವಿ.ವೇಲು ಅವರನ್ನು ಕ್ರಮವಾಗಿ ಉಪನಾಯಕ ಮತ್ತು ಪಕ್ಷದ ಸಚೇತಕರನ್ನಾಗಿ ನೇಮಿಸಲಾಗಿದೆ. ಗುರುವಾರ ಅಣ್ಣಾ ಅರಿವಲಯಂನಲ್ಲಿ ನಡೆದ ಡಿಎಂಕೆ ಶಾಸಕರ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ತಮಿಳುನಾಡು ವೆಟ್ಟಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ತಮಿಳುನಾಡಿನ ಒಂಬತ್ತನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ಈ ಘೋಷಣೆ ಹೊರಬಿದ್ದಿದೆ. ಟಿವಿಕೆಯ ಸೆಲ್ವಂ ಅವರನ್ನು ಉದಯನಿಧಿ 7,140 ಮತಗಳ ಅಂತರದಿಂದ ಸೋಲಿಸಿದ್ದರು. ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವುದು ರಾಜ್ಯ ರಾಜಕೀಯದಲ್ಲಿ ಒಂದು ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.