ದೇಶ

Video: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು; ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆ

ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಇದೀಗ ಇಂಟರ್ನೆಟ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Video: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು; ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆ
ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್
Published On :

ಪಾಟ್ನಾ: ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಹಕ್ಕುಗಳಿಗಾಗಿ 'ನಾರಿ ವಂದನ್'ಗೆ ಕಟಿಬದ್ಧರಾಗಿರುವುದಾಗಿ ಹೇಳುತ್ತಿದ್ದಾರೆ. ಮತ್ತೊಂದು ಕಡೆ ಬಿಹಾರದ ನೂತನ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.

ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಇದೀಗ ಇಂಟರ್ನೆಟ್ ನಲ್ಲಿ ತೀವ್ರ9 ಆಕ್ರೋಶ ವ್ಯಕ್ತವಾಗುತ್ತಿದೆ.

ಸಾರ್ವಜನಿಕ ಸಂವಾದದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದ ತಿವಾರಿ, ಹೆಣ್ಣುಮಕ್ಕಳಿಗೆ ಶಿಕ್ಷಣದ ಶಿಕ್ಷಣದ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದು, ಪ್ರತಿಭಟನೆ ಅಥವಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೋಗುವ ಬದಲು ಹೆಣ್ಣುಮಕ್ಕಳು ಮನೆಯೊಳಗೆ ಇರಬೇಕು ಎಂದು ಹೇಳಿದ ವಿಡಿಯೋ ಕ್ಲಿಪ್ ಇದೀಗ ವೈರಲ್ ಆಗಿದ್ದು, ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?

ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಮಿಥಿಲೇಶ್ ತಿವಾರಿ ಅವರು ಹುಡುಗಿಯರ ಶಿಕ್ಷಣದ ಬಗ್ಗೆ ಮಾತನಾಡುತ್ತಿರುವುದು ಕಂಡುಬರುತ್ತದೆ. ಈ ಕ್ಲಿಪ್‌ನಲ್ಲಿ ಅವರು, "ಅವರಿಗೆ ಶಿಕ್ಷಣದ ಅವಶ್ಯಕತೆ ಏನಿದೆ... ಮನೆಯಲ್ಲಿ ಇರಬೇಕು. ನಮ್ಮ ಮನೆಯ ಹೆಣ್ಣುಮಕ್ಕಳು ನಮ್ಮ ಶಕ್ತಿ... ಅವರು ನಮ್ಮ ಸಮೃದ್ಧಿಯ ಅಡಿಪಾಯ... ಮೋದಿ ಜಿ ಮಹಿಳಾ ಸಬಲೀಕರಣಕ್ಕಾಗಿ ನಿಂತಾಗ ಆ ಹೆಣ್ಣುಮಕ್ಕಳು ಬೀದಿಗೆ ಏಕೆ ಬರಬೇಕು?" ಎಂದು ಪ್ರಶ್ನಿಸಿದ್ದಾರೆ.

ಯಾರಾದರೂ "ಹಕ್ಕುಗಳಿಗಾಗಿ" ಹೋರಾಡಿದರೆ ಎಂದು ಪ್ರಶ್ನಿಸಿದಾಗ, ತಿವಾರಿ ಅವರು "ನೀವು ಹೇಗಾದರೂ ನಿಮ್ಮ ಹಕ್ಕುಗಳನ್ನು ಪಡೆಯುತ್ತೀರಿ" ಎಂದು ಉತ್ತರಿಸುತ್ತಾರೆ.

ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಹಲವರು ಸಚಿವರನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿವಿ ಕೂಡ ಈ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, "ಬಿಹಾರದ ಹೊಸ ಶಿಕ್ಷಣ ಸಚಿವರನ್ನು ಭೇಟಿ ಮಾಡಿ... ಆದರೆ ಉಗುಳಲು ಮರೆಯಬೇಡಿ" ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.