Video: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್
ಏಪ್ರಿಲ್ 23 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಇಂದು ಮೊದಲ ಬಾರಿಗೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದರು.

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಸೋಮವಾರ ನಿಕಟಪೂರ್ಣ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ, ಅಚ್ಚರಿ ಮೂಡಿಸಿದರು.
ಏಪ್ರಿಲ್ 23 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಇಂದು ಮೊದಲ ಬಾರಿಗೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದರು.
ವಿಜಯ್ ಅವರನ್ನು ಸ್ಟಾಲಿನ್ ಮತ್ತು ಅವರ ಪುತ್ರ ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಉದಯನಿಧಿ ಅವರು ಮುಖ್ಯಮಂತ್ರಿ ಆಗಮನದ ಸಮಯದಲ್ಲಿ ಹಸ್ತಲಾಘವ ಮತ್ತು ಅಪ್ಪುಗೆಯ ಮೂಲಕ ಸ್ವಾಗತಿಸಿದರು, ನಂತರ ಸ್ಟಾಲಿನ್ ಭೇಟಿಯ ಸಮಯದಲ್ಲಿ ವಿಜಯ್ ಅವರನ್ನು ಅಪ್ಪಿಕೊಂಡರು.
ಇಬ್ಬರು ನಾಯಕರು ಹೂಗುಚ್ಛಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಪರಸ್ಪರ ರೇಷ್ಮೆ ಶಾಲುಗಳನ್ನು ಹೊದಿಸಿ, ಗೌರವಿಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ವಿಜಯ್ ಅವರ ಟಿವಿಕೆ ನಡುವೆ ನಡೆದ ಚುನಾವಣಾ ತೀವ್ರ ಸ್ಪರ್ಧೆಯ ವಾರಗಳ ನಂತರ ಈ ಸಭೆ ಮಹತ್ವ ಪಡೆದುಕೊಂಡಿದೆ.
ಅಲ್ಲದೆ, ಭಾನುವಾರ ನಡೆದ ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು, ಹಿಂದಿನ ಸರ್ಕಾರವು ರಾಜ್ಯದ ಮೇಲೆ 10 ಲಕ್ಷ ಕೋಟಿ ರೂ. ಸಾಲದ ಹೊರೆ ಹೇರಿದೆ ಮತ್ತು ಖಜಾನೆಯನ್ನು ಖಾಲಿ ಮಾಡಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



