ದೇಶ

ವಿಧಾನಸಭೆ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡಿ ಪ್ರವೇಶಿಸಿದ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ; Video

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ವಿಧಾನಸಭೆ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡಿ ಪ್ರವೇಶಿಸಿದ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ; Video
ಸಿಎಂ ಸುವೇಂದು ಅಧಿಕಾರಿ
Published On :

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಇಂದು ಬುಧವಾರ ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡುವ ಮೂಲಕ ಗಮನ ಸೆಳೆದರು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ತೃಣಮೂಲ ಕಾಂಗ್ರೆಸ್‌ನ 15 ವರ್ಷದ ಆಡಳಿತಕ್ಕೆ ಅಂತ್ಯ ಹಾಡಿದೆ.

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ವಿರೋಧ ಪಕ್ಷದ ನಾಯಕರಾಗಿದ್ದ ಅವಧಿಯಲ್ಲಿ ಅಮಾನತು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದ್ದ ಅವರು ಇಂದು ನಡೆದುಕೊಂಡ ರೀತಿ ವಿನಯದ ಸಂಕೇತವೆಂದು ಹಲವರು ಮಾತನಾಡಿಕೊಂಡರು.

ಇದಕ್ಕೂ ಮೊದಲು ಅವರ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದರು. ಗಡಿ ಬೇಲಿ ನಿರ್ಮಾಣಕ್ಕೆ ಅನುಮೋದನೆ ಹಾಗೂ ಆರೋಗ್ಯ ಯೋಜನೆ ಜಾರಿಗೆ ಮೊದಲ ಹಂತದ ಕ್ರಮಗಳನ್ನು ಸರ್ಕಾರ ಕೈಗೊಂಡದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.