ಸರ್ಕಾರಿ ನೌಕರರು, ಶಿಕ್ಷಕರಿಗೆ ತಮಿಳುನಾಡು ಸಿಎಂ ವಿಜಯ್ ಭರ್ಜರಿ ಗಿಫ್ಟ್; DA ಹೆಚ್ಚಳ
ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ ₹1,230 ಕೋಟಿ ಹೊರೆಯಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಚೆನ್ನೈ: ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಗುರುವಾರ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 2 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ ಮಾಡಿದ್ದು, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ ₹1,230 ಕೋಟಿ ಹೊರೆಯಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸರ್ಕಾರಿ ನೌಕರರ ಡಿಎ ಶೇ.58 ರಿಂದ ಶೇ.60ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಸುಮಾರು 16 ಲಕ್ಷ ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
"ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಜನ-ಆಧಾರಿತ ಕಲ್ಯಾಣ ಕಾರ್ಯಕ್ರಮಗಳು ಮತ್ತು ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಕಲ್ಯಾಣಕ್ಕಾಗಿ ತನ್ನ ಬದ್ಧತೆಯನ್ನು ಪುನರುಚ್ಚರಿಸಲಿದೆ" ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



