ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ
ವಕೀಲ ಉಜ್ವಲ್ ಭಾಸಿನ್ ಅವರು ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಅವರಿಗೆ ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

ಚಂಡೀಗಢ: ಅಮೆಜಾನ್ ಪ್ರೈಮ್ ವಿಡಿಯೋ ವೆಬ್ ಸರಣಿ ಲುಖೆಯಲ್ಲಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವಕೀಲ ಉಜ್ವಲ್ ಭಾಸಿನ್ ಅವರು ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಅವರಿಗೆ ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಚಂಡೀಗಢದ ಸೆಕ್ಟರ್ 36 ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 79 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಕಾಯ್ದೆ), 2000 ರ ಸೆಕ್ಷನ್ 62-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ತಮ್ಮ ಆಕ್ಷೇಪಣೆಯನ್ನು ವಿವರಿಸಿದ ವಕೀಲ ಭಾಸಿನ್, ಕೆಲಸದಿಂದ ಹಿಂದಿರುಗಿದ ನಂತರವೂ ಮನೆಯ ಜವಾಬ್ದಾರಿಗಳನ್ನು ನಿರ್ವಹಿಸುವ ಕೆಲಸ ಮಾಡುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಲಾಗಿದೆ. ವೃತ್ತಿಪರ ಬದ್ಧತೆ ಮತ್ತು ತಮ್ಮ ಕುಟುಂಬಗಳನ್ನು ನೋಡಿಕೊಳ್ಳುವಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ವೆಬ್ ಸರಣಿಯ ವಿಡಿಯೋ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಯೋಗರಾಜ್ ಸಿಂಗ್ ಪಾತ್ರವು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂವಾದದ ಸಮಯದಲ್ಲಿ, ಅವರು ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



