West Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!
ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗೆದ್ದಿದ್ದ ಭಬಾನಿಪುರ ಕ್ಷೇತ್ರವನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಉಳಿಸಿಕೊಂಡಿದ್ದು, ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾದ 14 ದಿನಗಳ ಅವಧಿಯೊಳಗೆ ಸುವೇಂದು ಅಧಿಕಾರಿ ಸ್ಪೀಕರ್ ರತೀಂದ್ರ ಬೋಸ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಪುರ್ಬಾ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಮತ್ತು ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಎರಡರಿಂದಲೂ ಸ್ಪರ್ಧಿಸಿದ್ದರು.
ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



