ದೇಶ

ಹೀಗೂ ಉಂಟೆ! ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತ ಚಲಾವಣೆ; 10 ಜನರ ಬಂಧನ; ತನಿಖೆಗೆ ಆದೇಶ

ಮತದಾನ ಪ್ರಕ್ರಿಯೆ ಆರಂಭವಾದ ಸ್ವಲ್ಪ ಸಮಯದ ನಂತರ ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ವಿದೇಶಿ ಪ್ರಜೆಗಳನ್ನು ಬಂಧಿಸಿ, ಪೊಲೀಸರು ವರದಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಹೀಗೂ ಉಂಟೆ! ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತ ಚಲಾವಣೆ; 10 ಜನರ ಬಂಧನ; ತನಿಖೆಗೆ ಆದೇಶ
ಚುನಾವಣಾ ಆಯೋಗ (ಸಂಗ್ರಹ ಚಿತ್ರ) — online desk
Published On :

ಚೆನ್ನೈ: ಏಪ್ರಿಲ್ 23 ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಮತ ಚಲಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಚುನಾವಣಾ ಆಯೋಗ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮತದಾನ ಪ್ರಕ್ರಿಯೆ ಆರಂಭವಾದ ಸ್ವಲ್ಪ ಸಮಯದ ನಂತರ ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ವಿದೇಶಿ ಪ್ರಜೆಗಳನ್ನು ಬಂಧಿಸಿ, ಪೊಲೀಸರು ವರದಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬಂಧಿತ ವ್ಯಕ್ತಿಗಳ ತೋರು ಬೆರಳುಗಳಲ್ಲಿ ಅಳಿಸಲಾಗದ ಶಾಯಿ ಗುರುತನ್ನು ಗಮನಿಸಿದ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಆರೋಪದ ಮೇಲೆ ಒಂಬತ್ತು ಪ್ರಕರಣಗಳಲ್ಲಿ ಹತ್ತು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ಅವರನ್ನು ಚೆನ್ನೈ ಮತ್ತು ಮಧುರೈ ವಿಮಾನ ನಿಲ್ದಾಣಗಳಲ್ಲಿ ಬಂಧಿಸಲಾಗಿದ್ದು, ಪೊಲೀಸ್ ವಿಚಾರಣೆಯಲ್ಲಿ ಈ ಪ್ರಜೆಗಳು ಶ್ರೀಲಂಕಾ, ಯುಕೆ ಮತ್ತು ಕೆನಡಾದವರು ಎಂದು ತಿಳಿದುಬಂದಿದೆ.

"ಅವರು ಮತ ಚಲಾಯಿಸಲು ನಕಲಿ ಭಾರತೀಯ ಗುರುತಿನ ಚೀಟಿಗಳನ್ನು ಬಳಸಿದ್ದು, ಮತದಾನದ ನಂತರ ತಮ್ಮ ದೇಶಗಳಿಗೆ ಹಾರಲು ಪ್ರಯತ್ನಿಸಿದಾಗ ಅವರ ಬೆರಳುಗಳಲ್ಲಿ ಅಳಿಸಲಾಗದ ಶಾಯಿ ಕಂಡುಬಂದಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕೇಂದ್ರ ಅಪರಾಧ ವಿಭಾಗವು ಈ ಸಂಬಂಧ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.