"ಪಾಕಿಸ್ತಾನ ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ...": ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಬಿಗ್ ವಾರ್ನಿಂಗ್!
ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.

ನವದೆಹಲಿ: ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ, ಅವರು "ಭೌಗೋಳಿಕತೆ ಅಥವಾ ಇತಿಹಾಸದ ಭಾಗವಾಗಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಬೇಕು" ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಬಿಗ್ ವಾರ್ನಿಂಗ್ ನೀಡಿದ್ದಾರೆ.
ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಉಪೇಂದ್ರ ದ್ವಿವೇದಿ, ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ, ಅವರು ಭೌಗೋಳಿಕತೆ ಅಥವಾ ಇತಿಹಾಸದ ಭಾಗವಾಗಬೇಕೆ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಹೇಳಿದರು.
ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ನ ಮೊದಲ ವಾರ್ಷಿಕೋತ್ಸವ ಆಚರಿಸಿದ ಬೆನ್ನಲ್ಲೇ ಉಪೇಂದ್ರ ದ್ವಿವೇದಿ ಈ ಹೇಳಿಕೆ ನೀಡಿದ್ದಾರೆ. ಅವರು ಚಿಕ್ಕದಾಗಿ ಹೇಳಿದ್ದರೂ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದರು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



