ದೇಶ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬೆಂಕಿಗಾಹುತಿಯಾದ ಬೋಗಿಯನ್ನು ರೈಲಿನಿಂದ ಪ್ರತ್ಯೇಕಿಸಿದ್ದಾರೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!
ರೈಲಿ ಬೋಗಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು.
Published On :

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಭಾನುವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಪಶ್ಚಿಮ ಮಧ್ಯ ರೈಲ್ವೆಯ ಕೋಟಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಲುನಿ ರಿಚ್ಚಾ ಮತ್ತು ವಿಕ್ರಮಗಢ ಅಲೋಟ್ ನಿಲ್ದಾಣಗಳ ನಡುವೆ ಮುಂಜಾನೆ ಸುಮಾರು 5.30 ಕ್ಕೆ ರೈಲು ಸಂಖ್ಯೆ 12431 ರ ಬಿ-1 ಕೋಚ್‌ನಲ್ಲಿ ಈ ಅವಘಡ ಸಂಭವಿಸಿದೆ. ಈ ಬೋಗಿಯಲ್ಲಿ ಒಟ್ಟು 68 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬೆಂಕಿಗಾಹುತಿಯಾದ ಬೋಗಿಯನ್ನು ರೈಲಿನಿಂದ ಪ್ರತ್ಯೇಕಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಓವರ್‌ಹೆಡ್ ಎಲೆಕ್ಟ್ರಿಕ್ ಸರಬರಾಜು (OHE) ಸ್ಥಗಿತಗೊಳಿಸಿ, ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೂಲಕ ಮೂಲಕ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಮುಂದಿನ ಪ್ರಯಾಣಕ್ಕಾಗಿ ಅವರನ್ನು ಇತರ ಬೋಗಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಕೋಟಾ ನಿಲ್ದಾಣದಲ್ಲಿ ಹೆಚ್ಚುವರಿ ಬೋಗಿಯನ್ನು ಜೋಡಿಸಿ ರೈಲಿನ ಸಾಮರ್ಥ್ಯ ಮರುಸ್ಥಾಪಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಕೋಟಾ ರೈಲ್ವೆ ವಿಭಾಗದ ಪರಿಹಾರ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಈ ಅಪಘಾತದಿಂದಾಗಿ ದೆಹಲಿ-ಮುಂಬೈ ಮಾರ್ಗದ ರೈಲು ಸಂಚಾರದ ಮೇಲೆಯೂ ಪರಿಣಾಮ ಬೀರಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮತ್ತು ಸುರಕ್ಷತಾ ತಪಾಸಣೆ ನಡೆಸಿದ ಕಾರಣ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.

ರೈಲ್ವೆ ಅಧಿಕಾರಿಗಳ ಪ್ರಾಥಮಿಕ ತನಿಖೆಯ ಪ್ರಕಾರ, ಎಸಿ ಕೋಚ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.