ದೇಶ

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Video

ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Video
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ದೇಶಕ್ಕೆ ದೊಡ್ಡ 'ಆರ್ಥಿಕ ಆಘಾತ' ಎದುರಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಇಂದು ರಾಯ್‌ಬರೇಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, "ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರುತ್ತಿವೆ" ಎಂದು ವ್ಯಾಪಾರಿಗಳಿಗೆ ಎಚ್ಚರಿಸಿದರು.

ಹಲವು ವರ್ಷಗಳಿಂದ ನಾವು ನೋಡಿರದ ದೊಡ್ಡ ಆರ್ಥಿಕ ಆಘಾತ ಎದುರಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

"ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ" ಎಂದು ರಾಹುಲ್ ಗಾಂಧಿ ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.