ದೇಶ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

ಐದು ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರಬಂದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಟಿವಿಕೆಗೆ ಬೆಂಬಲ ಘೋಷಿಸಿತ್ತು.

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ
ವಿಜಯ್ - ರಾಹುಲ್ ಗಾಂಧಿ
Published On :

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಸುದೀರ್ಘ 59 ವರ್ಷಗಳ ನಂತರ ಅಧಿಕಾರ ಹಂಚಿಕೊಳ್ಳುತ್ತಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಸಕರಾದ ಎಸ್ ರಾಜೇಶ್ ಕುಮಾರ್ ಮತ್ತು ಪಿ ವಿಶ್ವನಾಥನ್ ಅವರನ್ನು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮೋದನೆ ನೀಡಿದ್ದಾರೆ.

ಮೇ 21 ರಂದು ಈ ಇಬ್ಬರು ನಾಯಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಬುಧವಾರ ತಿಳಿಸಿದ್ದಾರೆ.

59 ವರ್ಷಗಳ ದೀರ್ಘ ಅಂತರದ ನಂತರ ಕಾಂಗ್ರೆಸ್ ತಮಿಳುನಾಡು ಸಚಿವ ಸಂಪುಟಕ್ಕೆ ಸೇರುತ್ತಿರುವುದು ಪಕ್ಷಕ್ಕೆ ಐತಿಹಾಸಿಕ ಸಂದರ್ಭವಾಗಲಿದೆ ಎಂದು ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐದು ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರಬಂದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಟಿವಿಕೆಗೆ ಬೆಂಬಲ ಘೋಷಿಸಿತ್ತು.

ಇದಕ್ಕೂ ಮೊದಲು, ಟಿವಿಕೆ ಸರ್ಕಾರವು ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಸಿಕೆ ಮತ್ತು ಐಯುಎಂಎಲ್‌ಗೆ ಸಂಪುಟಕ್ಕೆ ಸೇರಲು ಆಹ್ವಾನ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.