ದೇಶದ ಪ್ರತಿಷ್ಠೆ ಹೆಚ್ಚಿಸಲು ಮೋದಿ ಶ್ರಮಿಸ್ತಿದ್ದಾರೆ: PM ವಿದೇಶ ಪ್ರವಾಸಕ್ಕೆ ಪವಾರ್ ಮೆಚ್ಚುಗೆ; ಕಾಂಗ್ರೆಸ್ ಗೆ ತೀವ್ರ ಮುಖಭಂಗ!
ದೇಶದ ಜನತೆಗೆ ಮಿತವ್ಯಯಕ್ಕೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ವಿದೇಶ ಪ್ರವಾಸ ಕೈಗೊಂಡಿರುವುದು ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿತ್ತು.

ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿದೇಶಗಳ ಪ್ರವಾಸಕ್ಕೆ ವಿಪಕ್ಷಗಳ ಟೀಕೆ ನಡುವೆಯೇ ಆ ಬಣದಲ್ಲಿ ಗುರುತಿಸಿಕೊಂಡಿರುವ ಪ್ರಮುಖ ರಾಜಕೀಯ ನೇತಾರ ಶರದ್ ಪವಾರ್, ಮೋದಿ ನಡೆಯನ್ನು ಬೆಂಬಲಿಸಿದ್ದಾರೆ.
ವಿದೇಶಗಳ ಪ್ರವಾಸ ರದ್ದುಗೊಳಿಸುವುದು, ಚಿನ್ನ ಖರೀದಿಸದೇ ಇರುವುದು ಸೇರಿ ದೇಶದ ಜನತೆಗೆ ಮಿತವ್ಯಯಕ್ಕೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ವಿದೇಶ ಪ್ರವಾಸ ಕೈಗೊಂಡಿರುವುದು ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿತ್ತು. ಆದರೆ ಈಗ ಶರದ್ ಪವಾರ್ ನೀಡಿರುವ ಹೇಳಿಕೆ ವಿಪಕ್ಷಗಳ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಮೂಡಿಸುವಂತಿದೆ.
ಮೋದಿ ವಿದೇಶದ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ ಸಿಪಿ ನಾಯಕ ಶರದ್ ಪವಾರ್, ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆಯನ್ನು ಹೆಚ್ಚು ಮಾಡುವತ್ತ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಜೊತೆ ತಮಗೆ ಭಿನ್ನಾಭಿಪ್ರಾಯ ಇದೆಯಾದರೂ ಅವರು ವಿದೇಶಗಳಲ್ಲಿ ದೇಶದ ಮರ್‍ಯಾದೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ಹೊಂದಿದ್ದಾರೆ ಎನ್ನುವುದನ್ನು ಗುರುತಿಸುವುದು ಬಹಳ ಮುಖ್ಯ ಎಂದು ಪವಾರ್ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಗೌರವವನ್ನು ಕಾಪಾಡುವ ವಿಷಯದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಅಡ್ಡಿಯಾಗಬಾರದು, ದೇಶದ ಮಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಉಳಿಸಲು ಪ್ರಧಾನಮಂತ್ರಿ ಮೋದಿ ಶ್ರಮಿಸುತ್ತಿದ್ದಾರೆ ಎಂದು ಪವಾರ್ ಹೇಳಿದರು.
ದೇಶದ ಗೌರವವು ರಾಜಕೀಯ ಪೈಪೋಟಿಗಳಿಗಿಂತ ಮೇಲಿರಬೇಕು ಮತ್ತು ಯಾವತ್ತೂ ಪಕ್ಷಪಾತಿ ರಾಜಕೀಯದ ವಿಷಯವಾಗಬಾರದು ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
"ಪ್ರಧಾನಮಂತ್ರಿ ಮೋದಿ ಅವರು ವಿದೇಶಗಳಲ್ಲಿ ಭಾರತದ ಪ್ರತಿಷ್ಠೆಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜಕೀಯ ಅಭಿಪ್ರಾಯಗಳು ವಿಭಿನ್ನವಾಗಿರಬಹುದು, ಆದರೆ ದೇಶದ ಮಾನ–ಗೌರವದ ವಿಷಯ ಬಂದಾಗ ರಾಜಕೀಯ ಭೇದಾಭಿಪ್ರಾಯಗಳನ್ನು ಒಳಗೆಳೆಯಬಾರದು," ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



