ದೇಶ

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್! POK ಯಲ್ಲಿ ಗುಂಡಿಕ್ಕಿ ಹಮ್ಜಾ ಬುರ್ಹಾನ್ ಹತ್ಯೆ; Video

'ಡಾಕ್ಟರ್' ಎಂದು ಕರೆಯಲಾಗುತ್ತಿದ್ದ ಪುಲ್ವಾಮಾ ನಿವಾಸಿ ಹಮ್ಜಾ ಬುರ್ಹಾನ್ ನನ್ನು 2022 ರಲ್ಲಿ ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕ ಎಂದು ಘೋಷಿಸಿತ್ತು.

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್! POK ಯಲ್ಲಿ ಗುಂಡಿಕ್ಕಿ ಹಮ್ಜಾ ಬುರ್ಹಾನ್ ಹತ್ಯೆ; Video
ಹಮ್ಜಾ ಬುರ್ಹಾನ್
Published On :

ಪುಲ್ವಾಮಾ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್ ಆಗಿದ್ದಾನೆ. ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರನ್ನು ಬಲಿಪಡೆದಿದ್ದ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಹಮ್ಜಾ ಬುರ್ಹಾನ್ ನನ್ನು ಅಪರಿಚಿತ ಗನ್ ಮ್ಯಾನ್ ಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

'ಡಾಕ್ಟರ್' ಎಂದು ಕರೆಯಲಾಗುತ್ತಿದ್ದ ಪುಲ್ವಾಮಾ ನಿವಾಸಿ ಹಮ್ಜಾ ಬುರ್ಹಾನ್ ನನ್ನು 2022 ರಲ್ಲಿ ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕ ಎಂದು ಘೋಷಿಸಿತ್ತು.

ಬುರ್ಹಾನ್ ಮೂಲ ಹೆಸರು ಅರ್ಜುಮಂದ್ ಗುಲ್ಜಾರ್ ದಾರ್. ಮುಜಫರಾಬಾದ್‌ನಲ್ಲಿ ಅಪರಿಚಿತ ದಾಳಿಕೋರರಿಂದ ದಾಳಿಗೊಳಗಾದ ನಂತರ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಹಮ್ಜಾ ಬುರ್ಹಾನ್, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಾಸ್ತವವಾಗಿ ಕಳೆದ ಎರಡು ವರ್ಷಗಳಲ್ಲಿ ಪಾಕಿಸ್ತಾನ ಮತ್ತು POK ಯಲ್ಲಿ ಹಲವು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಹಮ್ಜಾ ಬುರ್ಹಾನ್ ಯಾರು?

ಪುಲ್ವಾಮಾದ ರತ್ನಿಪೋರಾ ಪ್ರದೇಶದ ಖಾರ್ಬತ್ಪೋರಾದಲ್ಲಿ ಜನಿಸಿದ ಬುರ್ಹಾನ್ 2017 ರಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವ ನೆಪದಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ. ಆದಾರೆ ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಬದರ್‌ಗೆ ಸೇರ್ಪಡೆಯಾಗಿದ್ದ. ಅಲ್ಲದೇ ಅತಿ ಕಡಿಮೆ ಅವಧಿಯಲ್ಲಿಯೇ ಆ ಸಂಘಟನೆಯಲ್ಲಿ ಕಮಾಂಡರ್ ಹುದ್ದೆ ದಕ್ಕಿಸಿಕೊಂಡಿದ್ದ. ನಂತರ ಆತ ಕಾಶ್ಮೀರಕ್ಕೆ ಹಿಂತಿರುಗಿ ಯುವಕರನ್ನು ಧಾರ್ಮಿಕ ಮತಾಂಧರನ್ನಾಗಿ ಮಾಡುವ ಮತ್ತು ಅವರಿಗೆ ಧರ್ಮ ಪ್ರಚಾರ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದನು.

ದಕ್ಷಿಣ ಕಾಶ್ಮೀರದಲ್ಲಿ ಬುರ್ಹಾನ್ ತನ್ನ ಜಾಲವನ್ನು ಪುಲ್ವಾಮಾದಿಂದ ಶೋಪಿಯಾನ್‌ಗೆ ವಿಸ್ತರಿಸಿದ್ದ ಎನ್ನಲಾಗಿದೆ. ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳೊಂದಿಗೆ ಬುರ್ಹಾನ್ ಸಂಬಂಧ ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಪುಲ್ವಾಮಾ ಘಟನೆಯು ಭಾರತದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಜೈಶ್-ಎ-ಮೊಹಮ್ಮದ್ (JEM) ನಡೆಸಿದ ಅತ್ಯಂತ ಭೀಕರ ದಾಳಿಯಾಗಿದೆ. ಜೆಇಎಂ ಭಯೋತ್ಪಾದಕನೊಬ್ಬ ಲೆಥ್‌ಪೋರಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಸ್ಫೋಟಕಗಳಿಂದ ತುಂಬಿದ ಕಾರನ್ನು ಡಿಕ್ಕಿ ಹೊಡೆಸಿದ ನಂತರ 40 ಸಿಬ್ಬಂದಿ ಸಾವನ್ನಪ್ಪಿದರು. ಈ ದಾಳಿಯ ನಂತರ ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಕೋಟ್‌ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತು. ಇದು ಎರಡೂ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.