ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆ
ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುವುದಾಗಿ ಘೋಷಿಸಿದೆ.

ಚುನಾವಣಾ ಆಯೋಗವು ಜೂನ್ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ನಡೆಸುವುದಾಗಿ ಘೋಷಿಸಿದೆ.ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುವುದಾಗಿ ಘೋಷಿಸಿದೆ.
ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗವು ಇಂದು ಶುಕ್ರವಾರ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.
ಪ್ರಸ್ತುತ ರಾಜ್ಯಸಭಾ ಸದಸ್ಯರ ಅವಧಿ ಜೂನ್ 21ರಿಂದ ಜುಲೈ 19ರ ನಡುವೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸ್ಥಾನಗಳು ಖಾಲಿಯಾಗಲಿವೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಜಾರ್ಖಂಡ್‌ನಲ್ಲಿ ಎರಡು ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.
ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




