ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!
ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.

ತಿರುವನಂತಪುರ: ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ "ಕಾಕ್ರೋಚ್ ಜನತಾ ಪಾರ್ಟಿ" ಭಾರತವನ್ನು ಅಸ್ಥಿರಗೊಳಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸುವ ಗುರಿ ಹೊಂದಿರುವ ಗಡಿಯಾಚೆಗಿನ ಕಾರ್ಯಾಚರಣೆಯ ಭಾಗವಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಶನಿವಾರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಚಂದ್ರಶೇಖರ್, CockroachParty gambit ಎಂದು ಕರೆದಿದ್ದು, ವಿಪಕ್ಷಗಳ ನೆರವಿನಿಂದ ಆಗಿರುವ ಗಡಿಯಾಚೆಗಿನ ಪ್ರಭಾವಿ ಕಾರ್ಯಾಚರಣೆ ಎಂದು ಕರೆದಿದ್ದಾರೆ.
ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.
ಮೋದಿ ನಾಯಕತ್ವದಲ್ಲಿ ಭಾರತದ ಪ್ರಗತಿ ಮತ್ತು ಆಧುನೀಕರಣವು ಹಲವಾರು ದೇಶಗಳು ಮತ್ತು ಸ್ವಾರ್ಥ ಹಿತಾಸಕ್ತಿಗಳಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ. ನಮ್ಮ ದೇಶದ ನಿರಂತರ ಪ್ರಗತಿಗೆಅನೇಕ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


