ದೇಶ

ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ

"ರಾಘವ್ ಚಡ್ಡಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ" ಎಂದು ರಾಜ್ಯಸಭೆ ಅಧಿಸೂಚನೆಯಲ್ಲಿ ತಿಳಿಸಿದೆ.

ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ
ರಾಘವ್ ಚಡ್ಡಾ
Published On :

ನವದೆಹಲಿ: ಇತ್ತೀಚೆಗೆ ಆಮ್ ಆದ್ಮಿ ಪಕ್ಷ ತೊರೆದು ಭಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಮೇಲ್ಮನೆಯ ಅರ್ಜಿಗಳ ಸಮಿತಿಯ ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಅರ್ಜಿಗಳ ಸಮಿತಿಯನ್ನು ಪುನರ್ರಚಿಸಿದ ನಂತರ, ರಾಜ್ಯಸಭಾ ಅಧ್ಯಕ್ಷ ಸಿ ಪಿ ರಾಧಾಕೃಷ್ಣನ್ ಅವರು ಸದನದ 10 ಸದಸ್ಯರನ್ನು ಸಮಿತಿಗೆ ನಾಮನಿರ್ದೇಶನ ಮಾಡಿದರು.

"ರಾಘವ್ ಚಡ್ಡಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ" ಎಂದು ರಾಜ್ಯಸಭೆ ಅಧಿಸೂಚನೆಯಲ್ಲಿ ತಿಳಿಸಿದೆ. ಮೇ 20 ರಿಂದ ಜಾರಿಗೆ ಬರುವಂತೆ ರಾಜ್ಯಸಭಾ ಅಧ್ಯಕ್ಷರು ಸಮಿತಿಯನ್ನು ಪುನರ್ರಚಿಸಿದ್ದಾರೆ ಎಂದು ಅಧಿಸೂಚನೆ ಹೇಳಿದೆ.

ರಾಘವ್ ಚಡ್ಡಾ ನೇತೃತ್ವದ ಸಮಿತಿಯ ಸದಸ್ಯರು

ಹರ್ಷ್ ಮಹಾಜನ್, ಗುಲಾಮ್ ಅಲಿ, ಶಂಭು ಶರಣ್ ಪಟೇಲ್, ಮಯಂಕ್‌ಕುಮಾರ್ ನಾಯಕ್, ಮಸ್ತಾನ್ ರಾವ್ ಯಾದವ್ ಬೀಡಾ, ಜೆಬಿ ಮಾಥರ್ ಹಿಶಾಮ್, ಸುಭಾಶಿಶ್ ಖುಂಟಿಯಾ, ರುಂಗ್ವ್ರಾ ನರ್ಜಾರಿ ಮತ್ತು ಸಂತೋಷ್ ಕುಮಾರ್ ಪಿ.

ಮತ್ತೊಂದು ಅಧಿಸೂಚನೆಯಲ್ಲಿ, "ರಾಜ್ಯಸಭೆಯ ಅಧ್ಯಕ್ಷರು, ಮೇ 20, 2026 ರಂದು, ಕಾರ್ಪೊರೇಟ್ ಕಾನೂನುಗಳ(ತಿದ್ದುಪಡಿ) ಮಸೂದೆ, 2026 ರ ಜಂಟಿ ಸಮಿತಿಯ ಸದಸ್ಯರಾಗಿ ರಾಜ್ಯಸಭಾ ಸದಸ್ಯರಾದ ಡಾ ಮೇನಕಾ ಗುರುಸ್ವಾಮಿ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ."

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.