ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆ: ಮಾರ್ಕೊ ರೂಬಿಯೊ ಹೇಳಿದ್ದೇನು?
ಜಗತ್ತಿನ ಪ್ರತಿಯೊಂದು ದೇಶದಲ್ಲೂ ಮೂರ್ಖ ಜನರಿದ್ದಾರೆ. ಇಲ್ಲಿ ಮೂರ್ಖ ಜನರಿದ್ದಾರೆ ಎಂದು ನನಗೆ ಖಚಿತವಾಗಿದೆ, ಮತ್ತು ಅಮೆರಿಕದಲ್ಲಿ ಯಾವಾಗಲೂ ಮೂರ್ಖತನದ ಹೇಳಿಕೆ ನೀಡುವ ಮೂರ್ಖ ಜನರಿರುತ್ತಾರೆ ಎಂದು ಹೇಳಿದರು.

ನವದೆಹಲಿ: ಅಮೆರಿಕದಲ್ಲಿ ಭಾರತೀಯ-ಅಮೆರಿಕನ್ನರನ್ನು ಗುರಿಯಾಗಿಸಿಕೊಂಡ ಜನಾಂಗೀಯ ಹೇಳಿಕೆಗಳನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಅಂತಹ ಹೇಳಿಕೆಗಳು ಅಮೆರಿಕದ ಸಮಾಜವನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಆಡಳಿತವು ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಭಾರತ ಭೇಟಿಯ ಸಮಯದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ರೂಬಿಯೊ, ಭಾರತೀಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳು ಮತ್ತು ಆನ್‌ಲೈನ್ ನಿಂದನೆಗಳು ಬರುತ್ತಿವೆ ಎಂಬುದನ್ನು ಒಪ್ಪಿಕೊಂಡರು. ಆದರೆ ಪ್ರತಿಯೊಂದು ದೇಶದಲ್ಲೂ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳು ಇರುತ್ತಾರೆ. ಅಂತಹ ಕಾಮೆಂಟ್‌ಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದರು.
ಜಗತ್ತಿನ ಪ್ರತಿಯೊಂದು ದೇಶದಲ್ಲೂ ಮೂರ್ಖ ಜನರಿದ್ದಾರೆ. ಇಲ್ಲಿ ಮೂರ್ಖ ಜನರಿದ್ದಾರೆ ಎಂದು ನನಗೆ ಖಚಿತವಾಗಿದೆ, ಮತ್ತು ಅಮೆರಿಕದಲ್ಲಿ ಯಾವಾಗಲೂ ಮೂರ್ಖತನದ ಹೇಳಿಕೆ ನೀಡುವ ಮೂರ್ಖ ಜನರಿರುತ್ತಾರೆ ಎಂದು ಹೇಳಿದರು.
ಅಮೆರಿಕವನ್ನು "ಬಹಳ ಸ್ವಾಗತಾರ್ಹ ದೇಶ" ಎಂದು ಬಣ್ಣಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ, ಭಾರತೀಯ ವಲಸೆಗಾರರು ಸೇರಿದಂತೆ ಪ್ರಪಂಚದಾದ್ಯಂತದ ವಲಸಿಗರು ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ನಮ್ಮ ರಾಷ್ಟ್ರವು ಪ್ರಪಂಚದಾದ್ಯಂತದ ನಮ್ಮ ದೇಶಕ್ಕೆ ಬರುವ ಜನರಿಂದ ಶ್ರೀಮಂತವಾಗಿದೆ" ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಮತ್ತಿತರ ವೇದಿಕೆಗಳಲ್ಲಿ ಭಾರತೀಯ-ಅಮೆರಿಕನ್ ಸಮುದಾಯದ ವಿರುದ್ಧ ಜನಾಂಗೀಯ ನಿಂದನೆ ಮತ್ತು ದ್ವೇಷ ಭಾಷಣದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳು ಹೆಚ್ಚಾಗುತ್ತಿರುವಂತೆಯೇ ರೂಬಿಯೊ ಈ ಹೇಳಿಕೆ ನೀಡಿದ್ದಾರೆ.
ಭಾರತೀಯ-ಅಮೆರಿಕನ್ನರನ್ನು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅತ್ಯಂತ ಸಾಧನೆಗೈದ ಮತ್ತು ಗೌರವಾನ್ವಿತ ಸಮುದಾಯಗಳಲ್ಲಿ ಒಂದೆಂದು ರೂಬಿಯೊ ಬಣ್ಣಿಸಿದರು. ಬಹು ಕ್ಷೇತ್ರಗಳಲ್ಲಿ ಅವರ ಕೊಡುಗೆಗಳನ್ನು ಎತ್ತಿ ತೋರಿಸಿದರು. ತಂತ್ರಜ್ಞಾನ, ವ್ಯವಹಾರ, ಆರೋಗ್ಯ ರಕ್ಷಣೆ ಮತ್ತು ಸಾರ್ವಜನಿಕ ಸೇವೆಯಂತಹ ಕ್ಷೇತ್ರಗಳಲ್ಲಿ ಭಾರತೀಯ ವಲಸಿಗರು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ ಎಂದು ಅವರು ಹೇಳಿದರು.
"ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ವಲಸಿಗರು ಗಮನಾರ್ಹ ರೀತಿಯಲ್ಲಿ ಯಶಸ್ವಿಯಾಗಿದ್ದಾರೆ. ಅಜ್ಞಾನದ ದೃಷ್ಟಿಕೋನಗಳನ್ನು ಹೊಂದಿರುವ ಜನರು ಎಲ್ಲೆಡೆ ಇದ್ದಾರೆ.ಅಂತಹ ಕಾಮೆಂಟ್‌ಗಳು ಒಟ್ಟಾರೆಯಾಗಿ ಯುನೈಟೆಡ್ ಸ್ಟೇಟ್ಸ್‌ನ ಮೌಲ್ಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



