BJP ವಿರುದ್ಧ ಕೊನೆಯವರೆಗೂ ಹೋರಾಡುತ್ತೇವೆ, ಬಿಡುವ ಮಾತೇ ಇಲ್ಲ: ಮಮತಾ ಬ್ಯಾನರ್ಜಿ
ಫೇಸ್‌ಬುಕ್ ಲೈವ್ ಭಾಷಣದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿ ತಿರುಚಲಾಗಿದೆ ಎಂದು ಆರೋಪಿಸಿದರು.

ಕೋಲ್ಕತ್ತಾ: BJP ವಿರುದ್ಧ ಕೊನೆಯವರೆಗೂ ಹೋರಾಡುತ್ತೇವೆ, ಬಿಡುವ ಮಾತೇ ಇಲ್ಲ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ.
ಫೇಸ್‌ಬುಕ್ ಲೈವ್ ಭಾಷಣದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿ ತಿರುಚಲಾಗಿದೆ. ಸುಮಾರು 150 ವಿಧಾನಸಭಾ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್‌ನ ಜನಪ್ರಿಯ ಜನಾದೇಶವನ್ನು ತಿರುಚಲಾಗಿದೆ ಎಂದು ಆರೋಪಿಸಿದರು.
ಗೆಲುವಿನ ಸ್ಥಾನಗಳನ್ನು ಕಳೆದುಕೊಳ್ಳುವ ಸ್ಥಾನಗಳಾಗಿ ಮತ್ತು ಸೋತ ಸ್ಥಾನಗಳನ್ನು ಗೆಲ್ಲುವಿನ ಸ್ಥಾನಗಳಾಗಿ ಮಾಡಲಾಗಿದೆ. ಇಲ್ಲದಿದ್ದರೆ ಟಿಎಂಸಿ 220 ರಿಂದ 230 ಸ್ಥಾನಗಳನ್ನು ಪಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಜೂನ್ ಮೊದಲ ವಾರದಲ್ಲಿ ಇಂಡಿಯಾ ಬಣದ ಸದಸ್ಯರು ಜಂಟಿ ಕಾರ್ಯತಂತ್ರ ಕುರಿತು ಚರ್ಚಿಸಲು ಸಭೆ ಸೇರುವ ಸಾಧ್ಯತೆಯಿದೆ. ಧೀರ್ಘಕಾಲದ ರಾಜಕೀಯ ಕದನಕ್ಕೆ ವಿರೋಧಿ ಬಣ ಸಜ್ಜಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಆರೋಪಗಳನ್ನು ತಿರಸ್ಕರಿಸಿದ ಹಿರಿಯ ಬಿಜೆಪಿ ನಾಯಕಿ ಕೀಯಾ ಘೋಷ್, ಜನಾದೇಶ ಸ್ವೀಕರಿಸಲು ಬ್ಯಾನರ್ಜಿ ನಿರಾಕರಿಸಿದ್ದಾರೆ ಮತ್ತು ಪಿತೂರಿ ಸಿದ್ಧಾಂತಗಳ ಮೂಲಕ ಸೋಲನ್ನು ವಿವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
2011, 2016 ಮತ್ತು 2021 ರ ಗೆಲುವನ್ನು ಕಾನೂನುಬದ್ಧವೆಂದು ಒಪ್ಪಿಕೊಂಡಿದ್ದರೂ, ಈಗ ಯಾಕೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ ಎಂದು ಘೋಷ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



