ಅಂಬೇನಾಲಿ ಘಾಟ್ನಲ್ಲಿ ಭಯಾನಕ ಅಪಘಾತ: ಸಾವಿರ ಅಡಿ ಆಳದ ಪ್ರಪಾತಕ್ಕೆ ಬಿದ್ದ SUV ಕಾರು; 8 ಯುವಕರು ಸಾವು!
ಪಶ್ಚಿಮ ಘಟ್ಟದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಅಂಬೆನಾಲಿ ಘಾಟ್ ಬಳಿಯ ಮಹಾಬಲೇಶ್ವರ-ಪೋಲಾದ್‌ಪುರ ರಸ್ತೆಯಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಭಯಾನಕ ಅಪಘಾತ ಸಂಭವಿಸಿದ್ದು, ಎಸ್‌ಯುವಿ ಕಾರೊಂದು ಒಂದು ಸಾವಿರ ಅಡಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಪ್ರವಾಸಿಗರು ಮೃತಪಟ್ಟಿದ್ದಾರೆ.
ಪಶ್ಚಿಮ ಘಟ್ಟದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಅಂಬೆನಾಲಿ ಘಾಟ್ ಬಳಿಯ ಮಹಾಬಲೇಶ್ವರ-ಪೋಲಾದ್‌ಪುರ ರಸ್ತೆಯಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.
ಮೃತ ಯುವಕರು ಸತಾರಾ ಜಿಲ್ಲೆಯ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ದಪೋಲಿಯಿಂದ ಸತಾರಾಕ್ಕೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸತಾರಾ ನಿವಾಸಿಗಳಾದ ರಿತೇಶ್ ಲೋಖಂಡೆ(22), ಸುಹಾಸ್ ಲೋಖಂಡೆ(20)ಸ ಉತ್ಕರ್ಷ್ ಶಿಂಗ್ಟೆ(21), ನಿಖಿಲ್ ಶಿಂಗ್ಟೆ(25), ಮಹೇಶ್ ಪವಾರ್(25), ಆದಿತ್ಯ ಸಾಳುಂಖೆ(21), ರಾಜೇಶ್ ಕಾಟ್ಕರ್(35) ಹಾಗೂ ರತ್ನಿಗಿರಿಯ ಅಂಶ್ ಚವಾಣ್(19) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ 8 ಯುವಕರು ಸ್ಕಾರ್ಪಿಯೋ ಎಸ್‌ಯುವಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಕಡಿದಾದ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾದ ಪ್ರಪಾತಕ್ಕೆ ಬಿದ್ದಿದೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



