ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ; ದೆಹಲಿ ನ್ಯಾಯಾಲಯ ತೀರ್ಪು!
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ನವದೆಹಲಿ: 2024ರಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವರನ್ನು ದೋಷಿ ಎಂದು ದೆಹಲಿ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಶ್ವನಿ ಪನ್ವಾರ್ ಅವರು ಈ ಪ್ರಕರಣದಲ್ಲಿ ಲಂಬಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಅಲ್ಲದೆ, ಲಂಬಾಗೆ ಶಿಕ್ಷೆಯನ್ನು ನಿರ್ಧರಿಸುವ ಮೊದಲು ನ್ಯಾಯಾಲಯವು ಜೂನ್ 5 ರಂದು ಎರಡೂ ಕಡೆಯ ವಾದಗಳನ್ನು ಆಲಿಸಲು ದಿನಾಂಕ ನಿಗದಿಪಡಿಸಿದೆ.
ಮಹಿಳಾ ಮೀಸಲಾತಿಯನ್ನು ಬೆಂಬಲಿಸಿ 2024ರ ಜುಲೈ 29ರಂದು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಂಬಾ ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು ಮತ್ತು ಸಾರ್ವಜನಿಕ ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.
ಕಳೆದ ಡಿಸೆಂಬರ್ನಲ್ಲಿ, ದೆಹಲಿ ನ್ಯಾಯಾಲಯವು ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ವಿರುದ್ಧ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೋಷಾರೋಪ ನಿಗದಿ ಪಡಿಸಲು ಆದೇಶಿಸಿತ್ತು.
ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಲಂಬಾ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯನ್ನು ಫೆಬ್ರುವರಿ 6 ರಂದು ವಜಾಗೊಳಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



