ದೇಶ

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ 'ವಿಶ್ವಾಸಾರ್ಹ ಪಾಲುದಾರಿಕೆ' ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಕರೆ..!

ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯ ಪ್ರಮುಖ ಚಾಲಕಶಕ್ತಿಯಾಗಿ ಮುಂದುವರಿಯಬೇಕು ಎಂದು ಒತ್ತಿ ಹೇಳಿದರು.

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ 'ವಿಶ್ವಾಸಾರ್ಹ ಪಾಲುದಾರಿಕೆ' ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಕರೆ..!
ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಷಣ ಮಾಡಿದರು.
Published On :

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಕ್ವಾಡ್ ರಾಷ್ಟ್ರಗಳ ನಡುವೆ “ನಂಬಿಕಾರ್ಹ ಮತ್ತು ಪಾರದರ್ಶಕ ಸಹಭಾಗಿತ್ವ” ಅಗತ್ಯವಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯ ಪ್ರಮುಖ ಚಾಲಕಶಕ್ತಿಯಾಗಿ ಮುಂದುವರಿಯಬೇಕು ಎಂದು ಒತ್ತಿ ಹೇಳಿದರು.

ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಹಾಗೂ ಜಪಾನ್ ವಿದೇಶಾಂಗ ಸಚಿವ ತೋಶಿಮಿಟ್ಸು ಮೋಟೆಗಿ ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಜೈಶಂಕರ್ ವಹಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ತನ್ನ ಸೈನಿಕ ಶಕ್ತಿಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆ ಈ ಸಭೆ ಮಹತ್ವ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜೈಶಂಕರ್, ಕ್ವಾಡ್‌ನ ಪ್ರಮುಖ ಗಮನ ಇಂಡೋ-ಪೆಸಿಫಿಕ್ ಮೇಲೆಯೇ ಇರುತ್ತದೆ. “ಜಾಗತಿಕ ಮಟ್ಟದಲ್ಲಿ ಸರಕು ಸರಪಳಿ ಬಲಪಡಿಸುವುದು, ಸಂಪರ್ಕ ಮಾರ್ಗಗಳ ಅಡೆತಡೆ ನಿವಾರಣೆ, ಉತ್ಪಾದನೆ ಮತ್ತು ಸಂಪನ್ಮೂಲಗಳ ಕೇಂದ್ರೀಕರಣ, ಹಾಗೂ ಪ್ರಮುಖ ಮೂಲಸೌಕರ್ಯಗಳ ಕೊರತೆ ಮುಂತಾದ ಸವಾಲುಗಳನ್ನು ಎದುರಿಸಬೇಕಿದೆ. ಈ ಎಲ್ಲವt ಹೊಸ ಸಹಭಾಗಿತ್ವಗಳ ಅಗತ್ಯವನ್ನು ತೋರಿಸುತ್ತವೆ ಎಂದು ಹೇಳಿದರು.

ಇದೇ ವೇಳೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಎದುರಾಗುತ್ತಿರುವ ನಿರ್ದಿಷ್ಟ ಭದ್ರತಾ ಸವಾಲುಗಳ ಕುರಿತೂ ಜೈಶಂಕರ್ ಪ್ರಸ್ತಾಪಿಸಿದರು.

ತಂತ್ರಾತ್ಮಕ ನಂಬಿಕೆಯನ್ನು ಹೆಚ್ಚಿಸುವುದು, ಸಾಗರ ಭದ್ರತೆಯನ್ನು ಖಚಿತಪಡಿಸುವುದು, ಆರ್ಥಿಕ ಆಯ್ಕೆಗಳಿಗೆ ಉತ್ತೇಜನ ನೀಡುವುದು ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವುದು ಅಗತ್ಯ. ಇದನ್ನು ಸಾಧಿಸಲು ನಂಬಿಕಾರ್ಹ ಮತ್ತು ಪಾರದರ್ಶಕ ಸಹಭಾಗಿತ್ವಗಳು ಅತ್ಯುತ್ತಮ ಮಾರ್ಗ ಎಂದು ಅಭಿಪ್ರಾಯಪಟ್ಟರು.

ಸಾಗರ ಪ್ರಜಾಪ್ರಭುತ್ವ ರಾಷ್ಟ್ರಗಳು, ಬಹುಸಾಂಸ್ಕೃತಿಕ ಸಮಾಜಗಳು ಮತ್ತು ಮಾರುಕಟ್ಟೆ ಆಧಾರಿತ ಆರ್ಥಿಕ ವ್ಯವಸ್ಥೆಗಳಾಗಿ ನಾವು ಮುಕ್ತ ಮತ್ತು ತೆರೆಯಲಾದ ಇಂಡೋ-ಪೆಸಿಫಿಕ್ ಪ್ರದೇಶದ ಹೊಣೆಗಾರಿಕೆಯನ್ನು ಹಂಚಿಕೊಂಡಿದ್ದೇವೆ. ಈ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಕೇಂದ್ರಬಿಂದುವಾಗಿಯೇ ಉಳಿಯಬೇಕು ಹೇಳಿದರು.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಮಾತನಾಡಿ, ಕ್ವಾಡ್ ಅನ್ನು ಇನ್ನಷ್ಟು ಬಲಿಷ್ಠ ಮತ್ತು ಪರಿಣಾಮಕಾರಿಯಾಗಿ ರೂಪಿಸುವ ನಿಟ್ಟಿನಲ್ಲಿ ನಾವು ಬದ್ಧರಾಗಿದ್ದೇವೆ. ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ನಿರ್ಮಾಣವೇ ನಮ್ಮ ಗುರಿ ಎಂದು ಹೇಳಿದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮಾತನಾಡಿ, ಇತ್ತೀಚಿನ ಜಾಗತಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕ್ವಾಡ್ ಸಹಕಾರದ ಮಹತ್ವ ಹೆಚ್ಚಾಗಿದೆ ಎಂದು ಹೇಳಿದರು.

ಇಂಧನ ಭದ್ರತೆ, ನಾವಿಗೇಶನ್ ಸ್ವಾತಂತ್ರ್ಯ, ಪ್ರಮುಖ ಖನಿಜ ಸಂಪನ್ಮೂಲಗಳು ಸೇರಿದಂತೆ ಜಗತ್ತು ಎದುರಿಸುತ್ತಿರುವ ದೊಡ್ಡ ಸವಾಲುಗಳಿಗೆ ಕ್ವಾಡ್ ಸಮರ್ಥ ಪರಿಹಾರ ನೀಡುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.