ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ
ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಬಿಕಾನೇರ್: ಅಂತರಾಷ್ಟ್ರೀಯ ಗಡಿಗಳಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮ ನಿರ್ಮಾಣಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಹಲವು ವರ್ಷಗಳಿಂದ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳನ್ನು ಕೆಡವಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್‌ನಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ, ಭಾರತ-ಪಾಕಿಸ್ತಾನ ಗಡಿಯಲ್ಲಿರುವ ರಾಜಸ್ಥಾನದ ಗಡಿ ಜಿಲ್ಲೆಗಳಿಗೆ ಸಂಬಂಧಿಸಿದ ಭದ್ರತಾ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಿದರು.
ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅಪರಾಧಗಳು ಮತ್ತು ಮಾದಕವಸ್ತು ಪಿಡುಗಿನ ಮೂಲಗಳು, ಮಾದರಿಗಳು ಮತ್ತು ಜಾಲಗಳ ಬಗ್ಗೆ ಆಳವಾದ ಅಧ್ಯಯನವನ್ನು ಕೈಗೊಳ್ಳಲು ಹಾಗೂ ಈ ಸಮಸ್ಯೆಗಳು ಮತ್ತೆ ಉದ್ಭವಿಸದಂತೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಲು ಗಡಿ ಜಿಲ್ಲೆಗಳಿಗೆ ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಗಡಿ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ವಹಿವಾಟುಗಳ ಕಾನೂನು ಮತ್ತು ಆರ್ಥಿಕ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲು, ಅವುಗಳ ಹಣಕಾಸಿನ ಮೂಲಗಳನ್ನು ಪರಿಶೀಲಿಸಲು, ಮ್ಯೂಲ್ ಖಾತೆಗಳು ಮತ್ತು ಸುಳ್ಳು ಕಂಪನಿಗಳನ್ನು ಪತ್ತೆಹಚ್ಚಲು, ನಕಲಿ ಆಧಾರ್ ಕಾರ್ಡ್‌ಗಳನ್ನು ಗುರುತಿಸಲು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಯನ್ನು ನಿಯಂತ್ರಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



