ದೇಶ

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ

ಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ
ಗೋವಿಗೆ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನ ನೀಡುವಂತೆ ಮುಸ್ಲಿಂ ಸಂಘಟನೆಗಳ ಆಗ್ರಹ
Published On :

ನವದೆಹಲಿ: ಮುಸ್ಲಿಮರ ಪವಿತ್ರ ಬಕ್ರೀದ್ ಹಬ್ಬದ ದಿನವೇ ಮುಸ್ಲಿಂ ಸಂಘಟನೆಗಳು ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿವೆ.

ಹಿಂದೂ ಮತ್ತು ಮುಸ್ಲಿಮರ ನಡುವೆ ಸಾಮುದಾಯಿಕ ಸೌಹಾರ್ದತೆ ಮತ್ತು ಪರಸ್ಪರ ಗೌರವಕ್ಕೆ ಕರೆ ನೀಡುತ್ತಾ, ಮುಸ್ಲಿಂ ಸಂಘಟನೆಗಳು ಗುರುವಾರ ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿವೆ.

ಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.

“ಹಸುವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ” ಎಂದು ಬರೆದ ಫಲಕಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದ ಮುಸ್ಲಿಂ ಸಮುದಾಯದ ಸದಸ್ಯರು ನ್ಯೂ ಸೀಲಂಪುರದ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಬೇಡಿಕೆ ಮೊದಲೇನಲ್ಲ

ಅಂತೆಯೇ ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂಬುದು ಮುಸ್ಲಿಂ ಸಂಘಟನೆಗಳ ಮೊದಲ ಬಾರಿಯ ಬೇಡಿಕೆಯೇನಲ್ಲ. ಈ ಹಿಂದೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಕೆಲವು ಮುಸ್ಲಿಂ ಸಂಘಟನೆಗಳು ಇದೇ ಬೇಡಿಕೆ ಮುಂದಿರಿಸಿ ಪ್ರತಿಭಟನೆ ನಡೆಸಿದ್ದವು.

ಈದ್-ಉಲ್-ಅಜ್ಹಾ ಮೊದಲು ಜಮಿಯತ್ ಉಲಮಾ-ಎ-ಹಿಂದ್ (ಅರ್ಷದ್ ಮದನಿ ಬಣ) ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಇದೇ ರೀತಿಯ ಬೇಡಿಕೆಯನ್ನು ಮುಂದಿಟ್ಟಿದ್ದರು. ಆ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿ ಇಂದು ದೆಹಲಿಯಲ್ಲಿ ಮುಸ್ಲಿಂ ಸಂಘಟನೆಗಳು ಈ ಪ್ರತಿಭಟನೆ ನಡೆಸಿವೆ.

ಮುಸ್ಲಿಂ ಸಂಘಟನೆಗಳ ಈ ಉಪಕ್ರಮವು ದೇಶದಲ್ಲಿ ಸಹೋದರತ್ವವನ್ನು ಬಲಪಡಿಸುವುದಕ್ಕೂ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವುದಕ್ಕೂ ಉದ್ದೇಶಿತವಾಗಿದೆ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರೊಬ್ಬರು ತಿಳಿಸಿದ್ದಾರೆ.

ಇನ್ನೊಬ್ಬ ವ್ಯಕ್ತಿ, “ಹಸು ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಪ್ರಮುಖ ಸಂಕೇತವಾಗಿದೆ. ಅದಕ್ಕೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡಬೇಕು,” ಎಂದು ಹೇಳಿದರು.

ಪ್ರತಿಭಟನಾಕಾರರ ಪ್ರಕಾರ, ಈ ಉಪಕ್ರಮವು ವಿವಿಧ ಸಮುದಾಯಗಳ ನಡುವೆ ಪರಸ್ಪರ ಗೌರವವನ್ನು ಉತ್ತೇಜಿಸುವುದಕ್ಕೂ ಹಾಗೂ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವುದಕ್ಕೂ ಇದು ಉದ್ದೇಶಿತವಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.