ದೇಶ

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ಸಾವು

ಗುರುವಾರ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು.

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ಸಾವು
ಧನೇಂದ್ರ ಕುಮಾರ್
Published On :

ದೆಹಲಿ: ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಸಾವನ್ನಪ್ಪಿದ್ದಾರೆ.

ದೆಹಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಗುರುವಾರ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಗಾಯಗೊಂಡಿದ್ದ ಧನೇಂದ್ರ ಕುಮಾರ್ ಮತ್ತು ಅವರ ಮಗನನ್ನು ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಧನೇಂದ್ರ ಕುಮಾರ್ ಆಸ್ಪತ್ರೆಯಲೇ ಸಾವನ್ನಪ್ಪಿದ್ದಾರೆ. ಅವರ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.