ದೇಶ

ಇಂತಹ ಸುಗಮ ಅಧಿಕಾರ ಹಸ್ತಾಂತರ ಅಪರೂಪ, ಸಿದ್ದರಾಮಯ್ಯ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ: ಶಿವಸೇನೆ ನಾಯಕ ಸಂಜಯ್ ರಾವತ್; Video

ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ನಡೆಸಿದ ಈ "ಸುಗಮ ಅಧಿಕಾರ ಹಸ್ತಾಂತರ" ಯಾವುದೇ ರಾಜ್ಯದಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ.

ಇಂತಹ ಸುಗಮ ಅಧಿಕಾರ ಹಸ್ತಾಂತರ ಅಪರೂಪ, ಸಿದ್ದರಾಮಯ್ಯ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ: ಶಿವಸೇನೆ ನಾಯಕ ಸಂಜಯ್ ರಾವತ್; Video
ಶಿವಸೇನೆ ಮುಖಂಡ ಸಂಜಯ್ ರಾವತ್
Published On :

ಮುಂಬೈ: ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಸಿದ್ದರಾಮಯ್ಯ ಅವರು ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಸಂಜಯ್ ರಾವತ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಕರ್ನಾಟಕ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ನಡೆಸಿದ ಈ "ಸುಗಮ ಅಧಿಕಾರ ಹಸ್ತಾಂತರ" ಯಾವುದೇ ರಾಜ್ಯದಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ. ಸಿದ್ದರಾಮಯ್ಯ ಅವರ ಬಗ್ಗೆ ನನ್ನ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಅಧಿಕಾರ ತ್ಯಜಿಸುವುದು ಸಾಮಾನ್ಯ ವಿಷಯವಲ್ಲ. “ಸಾಮಾನ್ಯವಾಗಿ ಯಾರೂ ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನ ಬಿಟ್ಟುಕೊಡುವುದಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ್ದಾರೆ. ಇದು ರಾಷ್ಟ್ರೀಯ ರಾಜಕೀಯದಲ್ಲಿ ಅಪರೂಪದ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಪಕ್ಷದ ತೀರ್ಮಾನಕ್ಕೆ ಬದ್ಧತೆ ತೋರಿರುವುದು ರಾಜಕೀಯ ಪ್ರೌಢತೆಯ ಸಂಕೇತ. “ರಾಜಕೀಯದಲ್ಲಿ ಅಧಿಕಾರಕ್ಕಾಗಿ ಹೋರಾಟ ಸಾಮಾನ್ಯ. ಆದರೆ, ಪಕ್ಷದ ಆದೇಶಕ್ಕೆ ಮಣಿದು ಸುಗಮವಾಗಿ ಅಧಿಕಾರ ಹಸ್ತಾಂತರ ಮಾಡಿರುವುದು ದೊಡ್ಡ ವಿಷಯ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಒಳರಾಜಕೀಯ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ದೇಶದ ರಾಜಕೀಯ ವಲಯದಲ್ಲೂ ಗಮನ ಸೆಳೆದಿವೆ.

ಸಿದ್ದರಾಮಯ್ಯ ಅವರ ರಾಜೀನಾಮೆಯ ಬಳಿಕ ಡಿಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಬೆಳವಣಿಗೆ ಬಗ್ಗೆ ವಿವಿಧ ಪಕ್ಷಗಳ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.