NEET ಪ್ರಶ್ನೆಪತ್ರಿಕೆ ಸೋರಿಕೆ: ಲೋಪ ಪ್ರಶ್ನಿಸಿದ ಸುಪ್ರೀಂ ಕೋರ್ಟ್; ಹೊಣೆಗಾರಿಕೆ ಫಿಕ್ಸ್ ಮಾಡುವಂತೆ ಕೇಂದ್ರಕ್ಕೆ ಸೂಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠ, "ನಾವು ನಮ್ಮ ಯುವಜನರನ್ನು ನಿರಾಶೆಗೊಳಿಸಬಾರದು" ಎಂದು ಹೇಳಿದೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯ(ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾದ ಲೋಪಗಳ ಬಗ್ಗೆ ಪ್ರತಿಕ್ರಿಯಿಸಿ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ "ವಾಸ್ತವವಾಗಿ ತುಂಬಾ ಆಘಾತಕಾರಿ" ಎಂದು ಶುಕ್ರವಾರ ಹೇಳಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠ, "ನಾವು ನಮ್ಮ ಯುವಜನರನ್ನು ನಿರಾಶೆಗೊಳಿಸಬಾರದು" ಎಂದು ಹೇಳಿದೆ.
ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರವು ಯುವಜನರ ಆತಂಕಗಳ ಬಗ್ಗೆ ಗಂಭೀರವಾಗಿ ಕಾಳಜಿ ವಹಿಸುತ್ತಿದೆ ಮತ್ತು ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
"ನಿಜವಾದ ಹೊಣೆಗಾರಿಕೆ ನಿಗದಿಯಾಗುವವರೆಗೂ ಸಮಸ್ಯೆ ಬಗೆಹರಿವುದಿಲ್ಲ" ಎಂದು ಸುಪ್ರೀಂ ಪೀಠ ಖಡಕ್ ಆಗಿ ಹೇಳಿದ್ದು, ವಿದ್ಯಾರ್ಥಿಗಳು ವರ್ಷಗಳ ಕಾಲ ಕಷ್ಟಪಟ್ಟು ತಯಾರಿ ನಡೆಸುತ್ತಾರೆ. ಕುಟುಂಬಗಳು ಅಪಾರ ಹಣ ಹಾಗೂ ಭಾವನೆಗಳನ್ನು ಹೂಡಿಕೆ ಮಾಡುತ್ತವೆ. ಇಂತಹ ಸಂದರ್ಭಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದರೆ, ಅದು ಕೇವಲ ಪರೀಕ್ಷಾ ದೋಷವಲ್ಲ, ಯುವಕರ ಭವಿಷ್ಯಕ್ಕೆ ಹೊಡೆತವಾಗುತ್ತದೆ ಎಂದು ಎಚ್ಚರಿಸಿದೆ.
ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಗೆ ಕೆಲವು ಹೊಸ ಕಾರ್ಯವಿಧಾನಗಳನ್ನು ಜಾರಿಗೆ ತರಲಾಗಿದೆ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರು.
ಈ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿ, ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.
ನೀಟ್ ಯುಜಿ 2026 ಪರೀಕ್ಷೆ ಮೇ 3ರಂದು ನಡೆದಿತ್ತು. ಆದರೆ ಹಲವು ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದ ನಂತರ ಮೇ 12ರಂದು NTA ಪರೀಕ್ಷೆಯನ್ನು ರದ್ದುಪಡಿಸಿತು. ಇದೀಗ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, NTAಯನ್ನು ಪುನರ್‌ರಚನೆ ಮಾಡಬೇಕು ಅಥವಾ ಅದರ ಬದಲು ಸ್ವಾಯತ್ತ ಮತ್ತು ತಾಂತ್ರಿಕವಾಗಿ ಬಲಿಷ್ಠ ಸಂಸ್ಥೆಯನ್ನು ಸ್ಥಾಪಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



