ದೇಶ

Asian Games 2026: ಆಯ್ಕೆ ಟ್ರಯಲ್ಸ್ ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಕೋರ್ಟ್ ಅನುಮತಿ!

ಇದೇ ವೇಳೆ ದೆಹಲಿ ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ವಿಧಾನದ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು.

Asian Games 2026: ಆಯ್ಕೆ ಟ್ರಯಲ್ಸ್ ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಕೋರ್ಟ್ ಅನುಮತಿ!
ವಿನೇಶ್ ಪೋಗಟ್
Published On :

ನವದೆಹಲಿ: ಅನುಭವಿ ಕುಸ್ತಿಪಟು ಮತ್ತು ಒಲಿಂಪಿಯನ್ ವಿನೇಶ್ ಫೋಗಟ್ ಅವರಿಗೆ ಏಷ್ಯನ್ ಗೇಮ್ಸ್ 2026 ರ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಕ್ರೀಡಾ ಆಡಳಿತ ವಿಷಯಗಳಲ್ಲಿ ನ್ಯಾಯಾಂಗ ಹಸ್ತಕ್ಷೇಪದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಬೇರೆ ಯಾರಾದರೂ ಇದ್ದರೆ, ಅದು ವಿಭಿನ್ನ ವಿಷಯವಾಗಿರುತಿತ್ತು. ಆದರೆ ಅವರು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ವಿಧಾನದ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು. ಅಂತಹ ಪ್ರಕರಣಗಳಲ್ಲಿ ಸುಲಭ ಮತ್ತು ತ್ವರಿತ ನ್ಯಾಯಾಂಗದ ಹಸ್ತಕ್ಷೇಪವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ವೇಳಾಪಟ್ಟಿಗಳಲ್ಲಿ ತೊಡಕುಗಳನ್ನು ಉಂಟುಮಾಡಬಹುದು ಎಂದು ಹೇಳಿತು.

ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ ರಾಷ್ಟ್ರ ರಾಜಧಾನಿಯಲ್ಲಿ ಮೇ 30,31 ರಂದು ನಡೆಯಲಿದೆ. ಟ್ರಯಲ್ಸ್ ನಲ್ಲಿ ಭಾಗವಹಿಸಲು ವಿನೇಶ್ ಅವರಿಗೆ ಅವಕಾಶ ಕಲ್ಪಿಸಿ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ಮೇ 22 ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ, ಭಾರತೀಯ ಕುಸ್ತಿ ಫೆಡರೇಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯೂರ್ತಿ ಅಲೋಕ್ ಅರಾಧೆ ಅವರಿದ್ದ ನ್ಯಾಯಪೀಠ, ನೀವು ಅತ್ಯುತ್ತಮ ಕ್ರೀಡಾಪಟು. ಆದೇಶ ದೇಶ ಮೊದಲು ಫೋಗಟ್ ಅವರಿಗೆ ಹೇಳಿತು.

ಇವು ವೈದ್ಯಕೀಯ ಕಾಲೇಜು ಪ್ರವೇಶಗಳಲ್ಲ, ಆದರೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳು. ಇಂತಹ ವಿಚಾರಳಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸುವ ಮೂಲಕ ಇಡೀ ವೇಳಾಪಟ್ಟಿಗೆ ಅಡ್ಡಿಯುಂಟು ಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿತು. WFI ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಫೋಗಟ್ ಅವರ ಪ್ರತಿಕ್ರಿಯೆಯನ್ನು ಕೋರಿದ್ದು, ಈ ವಿಷಯವನ್ನು ಜೂನ್ 1 ರ ಸೋಮವಾರ ವಿಚಾರಣೆಗೆ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.