ಪಶ್ಚಿಮ ಬಂಗಾಳದ ಈ ಯೋಜನೆಗೆ ಕೇಂದ್ರದಿಂದ 2,103 ಕೋಟಿ ರೂ ಅನುದಾನ: ಸಿಎಂ Suvendu Adhikari ಮಾಹಿತಿ
ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (National Health Mission) ಜಾರಿಗೆ ಬರಲಿದ್ದು, ಈ ಯೋಜನೆಗಾಗಿ ಕೇಂದ್ರ ಸರ್ಕಾರ ₹2,103 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಮಹತ್ವದ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಬರೊಬ್ಬರಿ 2 ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಮಾಹಿತಿ ನೀಡಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (National Health Mission) ಜಾರಿಗೆ ಬರಲಿದ್ದು, ಈ ಯೋಜನೆಗಾಗಿ ಕೇಂದ್ರ ಸರ್ಕಾರ ₹2,103 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸುವೇಂದು ಅಧಿಕಾರಿ, 'ಪಶ್ಚಿಮ ಬಂಗಾಳದಲ್ಲಿ 1.36 ಕೋಟಿಗೂ ಹೆಚ್ಚು ಕುಟುಂಬಗಳು ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯ ವ್ಯಾಪ್ತಿಗೆ ಬರಲಿವೆ ಎಂದು ಹೇಳಿದರು.
ಅಂತೆಯೇ "ಇದರಿಂದ ರಾಜ್ಯದ ಜನಸಂಖ್ಯೆಯ ದೊಡ್ಡ ವರ್ಗಕ್ಕೆ ಗುಣಮಟ್ಟದ ಆರೋಗ್ಯ ಸೇವೆಯ ಬೆಂಬಲ ದೊರೆಯಲಿದೆ. ಪಶ್ಚಿಮ ಬಂಗಾಳವು ರಾಷ್ಟ್ರೀಯ ಆರೋಗ್ಯ ಮಿಷನ್ ಅನ್ನು ಜಾರಿಗೆ ತರಲಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ ₹2,103 ಕೋಟಿ ಮಂಜೂರು ಮಾಡಿದೆ.
ಅದರಲ್ಲಿ ಈಗಾಗಲೇ ₹527 ಕೋಟಿ ನಮಗೆ ಲಭಿಸಿದೆ. ಈ ನಿಧಿಗಳು ರಾಜ್ಯದಾದ್ಯಂತ ಆರೋಗ್ಯ ಸೇವೆಗಳ ವಿತರಣೆಯನ್ನು ಸುಧಾರಿಸಲು ಸಹಾಯ ಮಾಡಲಿವೆ" ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದರು.
ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ನಿಗಾ ವಹಿಸಲು ನಿಯಂತ್ರಣ ಕೊಠಡಿಗಳನ್ನು (ಕಂಟ್ರೋಲ್ ರೂಂಗಳು) ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



