FlyDubai ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಆರೋಗ್ಯ ಸ್ಥಿರ; ಮುಂದುವರಿದ ಚಿಕಿತ್ಸೆ
ನಿನ್ನೆ ಬುಧವಾರ ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹಪೈಲಟ್ ಮಚ್ಚಾರ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು.

ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನವನ್ನು ಅಪಘಾತಕ್ಕೀಡು ಮಾಡಲು ಯತ್ನಿಸಿದ ಸಹ ಪೈಲಟ್‌ನನ್ನು ತಡೆಯುವ ವೇಳೆ ಗಾಯಗೊಂಡ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಸೌದಿ ಅರೇಬಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಬುಧವಾರ ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹಪೈಲಟ್ ಮಚ್ಚಾರ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು.
ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಪೈಲಟ್‌ರನ್ನು ವಾಯವ್ಯ ಸೌದಿ ಅರೇಬಿಯಾದ ತಬೂಕ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ಆರೋಗ್ಯದ ಕುರಿತು ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದರೂ, ಸದ್ಯ ಅವರು ಸ್ಥಿರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಮಚ್ಚಾರ್ ಅವರ ಆರೋಗ್ಯದ ಸ್ಥಿತಿಯನ್ನು ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಕಾನ್ಸುಲೇಟ್ ಜನರಲ್ ಕಚೇರಿ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿವೆ. ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿರುವುದಾಗಿಯೂ ತಿಳಿಸಿದೆ.
ಅವರು ಗಾಯಗಳಿಂದ ಶೀಘ್ರ ಗುಣಮುಖರಾಗಲಿ ಎಂದು ನಾವು ಆಶಿಸುತ್ತೇವೆ. ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಸೌದಿ ಅಧಿಕಾರಿಗಳೊಂದಿಗೆ ಅವರ ಆರೋಗ್ಯದ ಕುರಿತು ನಿರಂತರವಾಗಿ ಮಾಹಿತಿ ಪಡೆಯುತ್ತೇವೆ ಮತ್ತು ಅವರ ಯೋಗಕ್ಷೇಮಕ್ಕಾಗಿ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತೇವೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಸಹ ಪೈಲಟ್‌ನ ವಿಮಾನ ಪತನಗೊಳಿಸುವ ಯತ್ನವನ್ನು ವಿಫಲಗೊಳಿಸಿದ ಬಳಿಕ, ವಿಮಾನದಲ್ಲಿದ್ದ ಪ್ರಯಾಣಿಕರು ಬುಧವಾರ ಸುರಕ್ಷಿತವಾಗಿ ಇಸ್ರೇಲ್ ತಲುಪಿದ್ದಾರೆ.
ಇಸ್ರೇಲಿ ಅಧಿಕಾರಿಗಳ ಪ್ರಕಾರ, ಸಹ ಪೈಲಟ್ ಒಮಾನ್ ದೇಶದ ಪ್ರಜೆಯಾಗಿದ್ದು, ಆತ ಮಚ್ಚಾರ್ ಅವರಿಗೆ ಚಾಕುವಿನಿಂದ ಇರಿದ ಬಳಿಕ ವಿಮಾನವು 30 ಸೆಕೆಂಡ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಸುಮಾರು 14,000 ಅಡಿ ಎತ್ತರದಿಂದ ಕೆಳಕ್ಕೆ ಕುಸಿದಿತ್ತು.
ಈ ವೇಳೆ ಮಚ್ಚಾರ್ ರಕ್ತಸಿಕ್ತ ಸ್ಥಿತಿಯಲ್ಲಿ ಕಾಕ್‌ಪಿಟ್‌ನ ನೆಲದ ಮೇಲೆ ಬಿದ್ದಿದ್ದರು. ಆದರೂ, ತಮ್ಮಲ್ಲಿದ್ದ ಕೊನೆಯ ಶಕ್ತಿಯನ್ನು ಬಳಸಿ ಕಾಕ್‌ಪಿಟ್ ಬಾಗಿಲಿನ ಲಾಕ್ ತೆರೆಯಲು ಯಶಸ್ವಿಯಾದರು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಕ್ತಾರ ಡೋರನ್ ಸ್ಪೀಲ್‌ಮನ್ ಅವರನ್ನು ಉಲ್ಲೇಖಿಸಿ ‘ದಿ ಟೈಮ್ಸ್ ಆಫ್ ಇಸ್ರೇಲ್’ ವರದಿ ಮಾಡಿದೆ.
ಇದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಹಪೈಲಟ್‌ನನ್ನು ನಿಯಂತ್ರಿಸಲು ಸಾಧ್ಯವಾಯಿತು. ವಿಮಾನದಲ್ಲಿದ್ದ ಫ್ಲೈದುಬೈನ ಮತ್ತಿಬ್ಬರು ಪೈಲಟ್‌ಗಳು ವಿಮಾನದ ನಿಯಂತ್ರಣ ಪಡೆದು ತಬೂಕ್‌ನಲ್ಲಿ ಸುರಕ್ಷಿತವಾಗಿ ಇಳಿಸಿದರು.
ವಿಮಾನವನ್ನು ಪತನದಿಂದ ರಕ್ಷಿಸಿದ ಮಚ್ಚಾರ್ ಅವರನ್ನು ನೆತನ್ಯಾಹು “ನಿಜವಾದ ಹೀರೋ” ಎಂದು ಶ್ಲಾಘಿಸಿದ್ದಾರೆ.
ಘಟನೆಯ ಸಂದರ್ಭದಲ್ಲಿ ಮಚ್ಚಾರ್ ತೋರಿದ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಶಂಸಿಸಿದ್ದಾರೆ. ಅವರ ಧೈರ್ಯ ಮತ್ತು ದೃಢಸಂಕಲ್ಪದಿಂದ ಭಾರೀ ದುರಂತವೊಂದು ತಪ್ಪಿತು ಎಂದು ಮೋದಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




