ಪ್ರತಿ ಶನಿವಾರ ಬ್ಯಾಂಕ್‌ಗಳಿಗೆ ರಜೆ ಎಂಬುದು ಸುಳ್ಳು ಸುದ್ದಿ: ಕೇಂದ್ರ ಸರ್ಕಾರ ಸ್ಪಷ್ಟನೆ
ಹಣಕಾಸು ಸಚಿವಾಲಯವು(ಹಣಕಾಸು ಸೇವೆಗಳ ಇಲಾಖೆ) ಹೊರಡಿಸಿದೆ ಎಂದು ಹೇಳಲಾದ ಗೆಜೆಟ್ ಅಧಿಸೂಚನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನವದೆಹಲಿ: ಎಸ್‌ಬಿಐ ಸೇರಿದಂತೆ ಸಾರ್ವಜನಿಕ ವಲಯದ ಎಲ್ಲಾ ಬ್ಯಾಂಕುಗಳಿಗೆ ಪ್ರತಿ ಶನಿವಾರ ರಜೆ ಘೋಷಿಸಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಕೇಂದ್ರ ಸರ್ಕಾರದ ಸತ್ಯಶೋಧನಾ ವಿಭಾಗವಾದ 'ಪಿಐಬಿ ಫ್ಯಾಕ್ಟ್ ಚೆಕ್'(PIB Fact Check) ತಿಳಿಸಿದೆ.
"ಹಣಕಾಸು ಸಚಿವಾಲಯವು(ಹಣಕಾಸು ಸೇವೆಗಳ ಇಲಾಖೆ) ಹೊರಡಿಸಿದೆ ಎಂದು ಹೇಳಲಾದ ಗೆಜೆಟ್ ಅಧಿಸೂಚನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ, ಎಸ್‌ಬಿಐ ಸೇರಿದಂತೆ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಕೇಂದ್ರ ಸರ್ಕಾರ ಪ್ರತಿ ಶನಿವಾರ ಸಾರ್ವಜನಿಕ ರಜಾದಿನವನ್ನಾಗಿ ಘೋಷಿಸಿದೆ ಎಂದು ಹೇಳಲಾಗಿದೆ" ಎಂದು ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.
ಅಲ್ಲದೆ, "ಹರಿದಾಡುತ್ತಿರುವ ಈ ದಾಖಲೆಯು ನಕಲಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಪ್ರತಿ ಶನಿವಾರ ರಜಾದಿನವೆಂದು ಘೋಷಿಸುವ ಯಾವುದೇ ಅಧಿಸೂಚನೆಯನ್ನು ಹಣಕಾಸು ಸಚಿವಾಲಯ ಹೊರಡಿಸಿಲ್ಲ" ಎಂದು ಸ್ಪಷ್ಟಪಡಿಸಿದೆ.
ಸೆಪ್ಟೆಂಬರ್ 28 ರಿಂದ 30 ರವರೆಗೆ ನಿಗದಿಯಾಗಿದ್ದ ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಬ್ಯಾಂಕ್ ಸಂಘಟನೆಗಳು ಮುಂದೂಡಿದ ಈ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.
'ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್' (UFBU)ನ ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ಶನಿವಾರ ರಜೆ ನೀಡಬೇಕು ಎಂಬ ಬೇಡಿಕೆಯೂ ಇತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



