ದೇಶ

ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಬಳಿ ಇಬ್ಬರು ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಡಿಯಾಚೆಯಿಂದ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಅವರ ಓಡಾಟವನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ನಿಲ್ಲುವಂತೆ ಎಚ್ಚರಿಕೆ ನೀಡಿದ್ದಾರೆ.

ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಬಳಿ ಇಬ್ಬರು ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಸಾಂದರ್ಭಿಕ ಚಿತ್ರ
Published On :

ಚಂಡೀಗಢ: ಪಂಜಾಬ್ ನ ತರನ್ ತಾರನ್ ಜಿಲ್ಲೆಯ ಭಾರತ- ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಡಿಯಾಚೆಯಿಂದ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಅವರ ಓಡಾಟವನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ನಿಲ್ಲುವಂತೆ ಎಚ್ಚರಿಕೆ ನೀಡಿದ್ದಾರೆ.

ಆದಾಗ್ಯೂ, ಆ ಇಬ್ಬರು ವ್ಯಕ್ತಿಗಳು ಭಾರತದ ಕಡೆಗೆ ನುಸುಳಲು ಯತ್ನಿಸಿದ್ದಾರೆ. ಇದರ ಬೆನ್ನಲ್ಲೇ, ಬಿಎಸ್‌ಎಫ್ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರೂ ಒಳನುಸುಳುಕೋರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಗುರುತು ಹಾಗೂ ಅವರಿಂದ ಯಾವ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.