ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಪ್ರತಿಭಟನೆ: 'ಹೈಕೋರ್ಟ್ ಆದೇಶ ಉಲ್ಲಂಘನೆ': ಅಭಿಜೀತ್ ದೀಪ್ಕೆ, ಇತರ ಮೂವರ ವಿರುದ್ಧ ದೂರು ದಾಖಲು!
ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಯು ಬಾಂಬೆ ಹೈಕೋರ್ಟ್ನ ಜನವರಿ 4, 2013ರ ತೀರ್ಪು (ಪಿಐಎಲ್ 116/2009) ಹಾಗೂ ಮಹಾರಾಷ್ಟ್ರ ಸರ್ಕಾರದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಪೊಲೀಸರ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲು ಮತ್ತು ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಯತ್ನಿಸಿದ ಆರೋಪದ ಮೇಲೆ ಅಭಿಜೀತ್ ಡಿಪ್ಕೆ, ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ರತ್ನಾ ಸಿಂಗ್ ಅವರ ವಿರುದ್ಧ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಯು ಬಾಂಬೆ ಹೈಕೋರ್ಟ್ನ ಜನವರಿ 4, 2013ರ ತೀರ್ಪು (ಪಿಐಎಲ್ 116/2009) ಹಾಗೂ ಮಹಾರಾಷ್ಟ್ರ ಸರ್ಕಾರದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಉದ್ದೇಶಿತ ಸಭೆಯನ್ನು "ಶಾಂತಿಯುತ ಪ್ರತಿಭಟನೆ" ಎಂದು ಕರೆಯಲು ಸಾಧ್ಯವಿಲ್ಲ. ಇದು ರಾಜಕೀಯ ಪ್ರದರ್ಶನದ ಹೆಸರಿನಲ್ಲಿ ಕಾನೂನನ್ನು ಧಿಕ್ಕರಿಸುವ ಪ್ರಯತ್ನವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಸಂವಿಧಾನವನ್ನು ರಕ್ಷಿಸುವುದಾಗಿ ಹೇಳಿಕೊಳ್ಳುವವರು, ಸಂವಿಧಾನದಿಂದಲೇ ಅಧಿಕಾರವನ್ನು ಪಡೆಯುವ ಹೈಕೋರ್ಟ್ನ ಅಧಿಕಾರವನ್ನೇ ಬಹಿರಂಗವಾಗಿ ಸವಾಲು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನ್ಯಾಯಾಂಗ ನಿರ್ದೇಶನಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳನ್ನು ಕಡೆಗಣಿಸಿ ಯಾರೂ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ದೂರುದಾರರು ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ಸಿದ್ಧಾಂತ, ರಾಜಕೀಯ ಅಭಿಯಾನ ಅಥವಾ ವ್ಯಕ್ತಿಯು ಸಂವಿಧಾನಕ್ಕಿಂತ ದೊಡ್ಡವರಲ್ಲ ಮತ್ತು ಕಾನೂನಿಗಿಂತ ಯಾರೂ ಮಿಗಿಲಾದವರಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



