ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ದುರ್ಗಾ ಮೂರ್ತಿ ಹೊತ್ತೊಯ್ಯುತ್ತಿದ್ದ 7 ಭಕ್ತರ ಸಾವು; 21 ಮಂದಿಗೆ ಗಂಭೀರ ಗಾಯ
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಮತ್ತು ಬೊಲೆರೊ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಅಮರಾವತಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಮತ್ತು ಬೊಲೆರೊ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಅಮರಾವತಿ ಜಿಲ್ಲೆಯ ಧಮನ್‌ಗಾಂವ್ ರೈಲ್ವೆ ಸಮೀಪದ ಚಾನೆಲ್ 97 ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬುಲ್ಧಾನಾ ಜಿಲ್ಲೆಯ ಶೇಗಾಂವ್‌ನಿಂದ ವಾರ್ಧಾ ಜಿಲ್ಲೆಗೆ ದುರ್ಗಾ ದೇವಿಯ ಮೂರ್ತಿಯನ್ನು ಭಕ್ತರು ಬೊಲೆರೊ ಟೆಂಪೋ ಪಿಕಪ್ ವಾಹನದಲ್ಲಿ ತರುತ್ತಿದ್ದರು. ಅಕ್ಟೋಬರ್ 1, 2026 ರ ಮಧ್ಯರಾತ್ರಿ 12:45 ರ ಸುಮಾರಿಗೆ ಧಮನ್‌ಗಾಂವ್ ರೈಲ್ವೆ ಸ್ಟೇಷನ್ ಸಮೀಪದ ಹೆದ್ದಾರಿಯಲ್ಲಿ, ಅತಿ ವೇಗವಾಗಿ ಬಂದ ಟ್ರಕ್ವೊಂದು ಪಿಕಪ್ ವಾಹನಕ್ಕೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಇನ್ನು, ಡಿಕ್ಕಿಯ ರಭಸಕ್ಕೆ ಟೆಂಪೋ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದರಂತೆ, ಅಪಘಾತಕ್ಕೆ ಟ್ರಕ್ ವೇಗವಾಗಿ ಬಂದು ಟೆಂಪೋದ ಟ್ರಾಲಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಮುಂದುವರೆದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 21 ಮಂದಿಯನ್ನು ರಕ್ಷಿಸಿ ತಕ್ಷಣವೇ ಸ್ಥಳೀಯ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಮರಾವತಿ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ನಿಕೇತನ್ ಕದಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


