ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ; ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್; ರಕ್ಷಣೆ; Video
RPF ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ನಾಗ್ಪುರ: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕನೋರ್ವ ಅಯತಪ್ಪಿ ಅಪಾಯಕ್ಕೆ ಸಿಲುಕಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಆರ್ ಪಿಎಫ್ ಸಿಬ್ಬಂದಿ ಸಾಹಸ ಮೆರೆದು ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ನಾಗ್ಪುರ ರೈಲು ನಿಲ್ದಾಣದಲ್ಲಿ ಅಕ್ಟೋಬರ್ 1ರಂದು ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ವೇಳೆ RPF ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ನಾಗ್ಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 4ರಿಂದ ಹೌರಾ ಎಸಿ ದುರಂತ್ ಎಕ್ಸ್‌ಪ್ರೆಸ್ ಹೊರಡುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ್ದಾನೆ.
ಈ ವೇಳೆ ಪರಿಸ್ಥಿತಿಯನ್ನು ಗಮನಿಸಿದ RPF ಕಾನ್‌ಸ್ಟೆಬಲ್ ತಕ್ಷಣ ಪ್ರಯಾಣಿಕನತ್ತ ಧಾವಿಸಿ ಆತನನ್ನು ರಕ್ಷಿಸಿದ್ದಾರೆ. RPF ಸಿಬ್ಬಂದಿಯ ಸಮಯೋಚಿತ ಮಧ್ಯಪ್ರವೇಶದಿಂದ ಸಂಭವಿಸಬಹುದಾಗಿದ್ದ ಗಂಭೀರ ಅಪಘಾತ ತಪ್ಪಿದೆ.
ಚಲಿಸುತ್ತಿರುವ ರೈಲಿಗೆ ಹತ್ತಲು ಅಥವಾ ಇಳಿಯಲು ಪ್ರಯತ್ನಿಸುವುದು ಅತ್ಯಂತ ಅಪಾಯಕಾರಿ. ರೈಲು ಹೊರಡುವ ಮುನ್ನವೇ ಪ್ರಯಾಣಿಕರು ತಮ್ಮ ಬೋಗಿಯನ್ನು ತಲುಪಿ, ರೈಲು ಚಲಿಸಲು ಆರಂಭಿಸಿದ ಬಳಿಕ ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬಾರದು ಎಂದು ರೈಲ್ವೆ ಅಧಿಕಾರಿಗಳು ಎಚ್ಚರಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



