ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸಿಡಿದು ಐವರು ಕಾರ್ಮಿಕರು ಸಾವು!
ತಿರುಪತಿ ಜಿಲ್ಲೆಯಲ್ಲಿರುವ ಟಿಐಎಲ್ ಹೆಲ್ತ್ಕೇರ್ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ, ಶನಿವಾರ ಮುಂಜಾನೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ತಿರುಪತಿ (ಆಂಧ್ರ ಪ್ರದೇಶ): ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀ ಸಿಟಿ ವಿಶೇಷ ಆರ್ಥಿಕ ವಲಯದಲ್ಲಿರುವ ಟಿಐಎಲ್ ಹೆಲ್ತ್ಕೇರ್ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ, ನೈಟ್ ಶಿಫ್ಟ್ ಮುಗಿಸಿ ಕಾರ್ಮಿಕರು ಹೊರಡುವ ತಯಾರಿಯಲ್ಲಿದ್ದಾಗ, ಶನಿವಾರ ಮುಂಜಾನೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡದ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲದ ವ್ಯಾಪ್ತಿಗೆ ಬರುವ ಶ್ರೀ ಸಿಟಿ ಕೈಗಾರಿಕಾ ವಲಯದಲ್ಲಿ ಇರುವ ಟಿಐಎಲ್ ಹೆಲ್ತ್ಕೇರ್ ಫಾರ್ಮಾ ಕಂಪನಿಯ, ಮಾತ್ರೆಗಳನ್ನು ಉತ್ಪಾದಿಸುವ ಘಟಕದಲ್ಲಿ ಮುಂಜಾನೆ ಇದ್ದಕ್ಕಿದ್ದಂತೆ ನೀರಿನ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡದ ಕಾಂಕ್ರೀಟ್ ಗೋಡೆಗಳು ಸಿಡಿದು ಬಿದ್ದಿದ್ದು, ತಕ್ಷಣವೇ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಆವರಿಸಿಕೊಂಡಿದ್ದು, ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಮೃತಪಟ್ಟರೆ, ಇನ್ನು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಜೊತೆಗೆ, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ 10ಕ್ಕೂ ಹೆಚ್ಚು ಕಾರ್ಮಿಕರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ವಿಶೇಷ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮುಂದುವರೆದು, ಘಟನೆ ಸಂಬಂಧ ಸಂತಾಪ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದಿಗ್ಭ್ರಾಂತಿ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ, ಸಂತ್ರಸ್ತ ಕುಟುಂಬಗಳ ಪರವಾಗಿ ನಿಲ್ಲುವುದಾಗಿ ಭರವಸೆ ನೀಡಿದ ಅವರು, ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



