ದೇಶ

ಜಮ್ಮು: ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯೋಧನ ಶವ ಪತ್ತೆ

ಮಹಾರಾಷ್ಟ್ರದ ನಿವಾಸಿಯಾಗಿದ್ದ ನಾಯಕ್ ವಾಘ್ ಅಂಬಾದೇಸ್ ಅವರು, ಇಲ್ಲಿನ ಚನ್ನಿ ಹಿಮ್ಮತ್ ಪ್ರದೇಶದಲ್ಲಿರುವ ಸುಂಜ್ವಾನ್ ಶಿಬಿರದ ಶೆಡ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಮ್ಮು: ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯೋಧನ ಶವ ಪತ್ತೆ
ಅಪರಾಧ — online desk
Published On :

ಜಮ್ಮುವಿನ ಸೇನಾ ಶಿಬಿರವೊಂದರಲ್ಲಿ ಭಾನುವಾರ 45 ವರ್ಷದ ಸೈನಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಿವಾಸಿಯಾಗಿದ್ದ ನಾಯಕ್ ವಾಘ್ ಅಂಬಾದೇಸ್ ಅವರು, ಇಲ್ಲಿನ ಚನ್ನಿ ಹಿಮ್ಮತ್ ಪ್ರದೇಶದಲ್ಲಿರುವ ಸುಂಜ್ವಾನ್ ಶಿಬಿರದ ಶೆಡ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳಿಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಆತ್ಮಹತ್ಯೆಗೆ ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಹೇಳಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖಾ ಪ್ರಕ್ರಿಯೆಯನ್ನು (ಇನ್‌ಕ್ವೆಸ್ಟ್) ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.