ದೇಶ

ಅಕ್ರಮ ಸಂಬಂಧ ಶಂಕೆ: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಲೆಕ್ಚರರ್ ಅಪಹರಿಸಿ ಭೀಕರ ಹತ್ಯೆ!

ಲೆಕ್ಚರರ್ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಕ್ರಮ ಸಂಬಂಧ ಶಂಕೆ: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಲೆಕ್ಚರರ್ ಅಪಹರಿಸಿ ಭೀಕರ ಹತ್ಯೆ!
ಸಾಂದರ್ಭಿಕ ಚಿತ್ರ
Published On :

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ, ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇರೆಗೆ ಸಿನಿಮೀಯರ ರೀತಿಯಲ್ಲಿ 32 ವರ್ಷದ ಕಾಲೇಜು ಉಪನ್ಯಾಸಕರೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ನಂತರ ಕಬ್ಬಿಣದ ರಾಡ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಲೆಕ್ಚರರ್ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು ಮಾಧವ್ ಅಲಿಯಾಸ್ ನಿತಿನ್ ಧಾನಾಜಿ ಸಂಗಮೆ ಎಂದು ಗುರುತಿಸಲಾಗಿದೆ. ಮಾಧವ್ ಅವರನ್ನು ಭಾನುವಾರ ಲಾತೂರ್ ನಗರದಲ್ಲಿ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು, ನೆರೆಯ ಬೀಡ್ ಜಿಲ್ಲೆಯ ಅಂಬಾಜೋಗೈ ತಾಲೂಕಿನ ಬರ್ದಾಪುರ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

"ಕಾರಿನಲ್ಲಿದ್ದ ನಾಲ್ವರು ವ್ಯಕ್ತಿಗಳು ಕಲ್ಲು ಪುಡಿ ಮಾಡುವ ಘಟಕವೊಂದರ ಬಳಿ ಮಾಧವ್ ಅವರ ಮೇಲೆ ಕಬ್ಬಿಣದ ರಾಡ್, ಕೋಲು ಮತ್ತು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ," ಎಂದು ಪೊಲೀಸರು ಹೇಳಿದ್ದಾರೆ.

ಲಾತೂರ್ ನಿವಾಸಿಗಳಾದ ಪೃಥ್ವಿರಾಜ್ ದೇಶಮುಖ್, ಧವಲ್ ದೇಶಮುಖ್, ಪ್ರಥಮೇಶ್ ರೆಡ್ಡಿ ಮತ್ತು ಆದಿತ್ಯ ಭಾಲ್ಕೆ ವಿರುದ್ಧ ಅಪಹರಣ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.