ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!
ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ವೇಳೆ ಪ್ರಸ್ತಾವನೆಯನ್ನು ಪಠಿಸುವಂತೆ ನಿರ್ದೇಶನ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

ನವದೆಹಲಿ: ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಸಮಯದಲ್ಲಿ ಸಂವಿಧಾನದ ಪ್ರಸ್ತಾವನೆ ಪಠಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಅಗಸ್ಟಿನ್ ಜಾರ್ಜ್ ಮಸಿಹ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು "ಅರ್ಜಿ ವಜಾಗೊಳಿಸಲಾಗಿದೆ ಎಂದು ಹೇಳಿತು.
ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ವೇಳೆ ಪ್ರಸ್ತಾವನೆಯನ್ನು ಪಠಿಸುವಂತೆ ನಿರ್ದೇಶನ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.
ಈ ಸಂಬಂಧ ಅವರು ಶಿಕ್ಷಣದ ಹಕ್ಕಿಗೆ ಸಂಬಂಧಿಸಿದ ಸಂವಿಧಾನದ ವಿಧಿ 21ಎ ಅನ್ನು ಉಲ್ಲೇಖಿಸಿದರು. ಶಾಲೆಗಳಲ್ಲಿ 6ನೇ ತರಗತಿಯಲ್ಲಿ ಈಗಾಗಲೇ ಪ್ರಸ್ತಾವನೆಯನ್ನು ಕಲಿಸಲಾಗುತ್ತಿದೆ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



