ಸತ್ಯನಿಕೇತನ ದುರಂತ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ; ಕಟ್ಟಡದಡಿ ಹಲವರು ಸಿಲುಕಿರುವ ಆತಂಕ
ಸತ್ಯನಿಕೇತನದಲ್ಲಿ ಐದು ಅಂತಸ್ತಿನ ಪಿಜಿ ಕಟ್ಟಡವೊಂದು ಕುಸಿದು ಬಿದ್ದು 7 ಮಂದಿ ಮೃತಪಟ್ಟ ಕೇವಲ ಒಂದು ತಿಂಗಳ ನಂತರ, ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಮತ್ತೊಂದು ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ದಕ್ಷಿಣ ದೆಹಲಿಯ ಸತ್ಯನಿಕೇತನದಲ್ಲಿ ಐದು ಅಂತಸ್ತಿನ ಪಿಜಿ ಕಟ್ಟಡವೊಂದು ಕುಸಿದು ಬಿದ್ದು 7 ಮಂದಿ ಮೃತಪಟ್ಟ ಕೇವಲ ಒಂದು ತಿಂಗಳ ನಂತರ, ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಮತ್ತೊಂದು ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಮಧ್ಯಾಹ್ನ 3:30 ರ ಸುಮಾರಿಗೆ ಇಸ್ಗಾ ಮಚ್ಲಿ ಮಂಡಿ ಪ್ರದೇಶದ ಬಳಿ ಈ ಘಟನೆ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ದೆಹಲಿಯ ಸೀಮಾಪುರಿಯ ಈದ್ಗಾ ಮಸೀದಿ ಹಾಗೂ ಮೀನು ಮಾರುಕಟ್ಟೆಯ ಸಮೀಪವಿದ್ದ ಐದು ಅಂತಸ್ತಿನ ಕಟ್ಟಡವೊಂದು ಬುಧವಾರ ಮಧ್ಯಾಹ್ನ ಸರಿಸುಮಾರು 3:15 ರಿಂದ 3:30 ರ ಅವಧಿಯಲ್ಲಿ ದಿಢೀರನೆ ಕುಸಿದು ಬಿದ್ದಿದೆ. ಕಟ್ಟಡದ ಮುಂಭಾಗದ ಭಾಗವು ಕುಸಿದುಬಿದ್ದ ಪರಿಣಾಮ ಅವಶೇಷಗಳ ರಾಶಿ ರಸ್ತೆಯವರೆಗೂ ಆವರಿಸಿಕೊಂಡಿದೆ. ಏತನ್ಮಧ್ಯೆ, ದೆಹಲಿ ಅಗ್ನಿಶಾಮಕ ಸೇವೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


