ದೇಶ

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಎಳೆದೊಯ್ದು ಬಸ್‌ಗಳಿಗೆ ತುಂಬಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್‌ಗಳ ಪೈಕಿ ಒಂದರ ಟೈರ್ ಅನ್ನು ಪಂಕ್ಚರ್ ಮಾಡಿದರು ಎಂದು ಪಕ್ಷ ಹೇಳಿದೆ.

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು
ರಾಹುಲ್ ಗಾಂಧಿ
Published On :

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಜಂತರ್ ಮಂತರ್‌ನತ್ತ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು 'ಇಂಡಿಯಾ' ಮೈತ್ರಿಕೂಟದ ಇತರ ಸಂಸದರನ್ನು ಬುಧವಾರ ಸಂಜೆ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ನಾಯಕರು ಬುಧವಾರ ಜಂತರ್‌ ಮಂತರ್‌ನತ್ತ ಮೆರವಣಿಗೆ ನಡೆಸಿದರು.

ಈ ವೇಳೆ ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಎಳೆದೊಯ್ದು ಬಸ್‌ಗಳಿಗೆ ತುಂಬಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್‌ಗಳ ಪೈಕಿ ಒಂದರ ಟೈರ್ ಅನ್ನು ಪಂಕ್ಚರ್ ಮಾಡಿದರು ಎಂದು ಪಕ್ಷ ಹೇಳಿದೆ.

ಪೊಲೀಸರ ಮನವಿಯ ಹೊರತಾಗಿಯೂ ಸ್ಥಳದಿಂದ ತೆರಳಲು ನಿರಾಕರಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಲ್ಲಿಯೇ ಧರಣಿ ನಡೆಸಿದರು.

ಮತ್ತೊಂದೆಡೆ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಮಹಿಳಾ ಸಂಸದರು ಜಂತರ್ ಮಂತರ್‌ಗೆ ಹೋಗುವ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಸ್ಥಳದಿಂದ ತೆರವುಗೊಳಿಸಿದರು.

ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿದ ಬಳಿಕ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು.

ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ತೆರಳಲು ಅವಕಾಶ ಸಿಗದಿದ್ದಾಗ, ಆಕಾಶವಾಣಿ ಭವನದ ಬಳಿ ಹಠಾತ್ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಕುಟುಂಬದವರನ್ನು ನಿನ್ನೆ ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.