ದೇಶ

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!

ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು.

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರತಿಪಕ್ಷಗಳ ಹಲವು ಸಂಸದರು ಮತ್ತು ನೂರಾರು ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅವರ ಬೆಂಬಲಿಗರು ಹಾಗೂ ಅವರೊಂದಿಗೆ ತೆರಳಿದ್ದ ಇತರ ಸಂಸದರು ಅನುಮತಿ ಇಲ್ಲದೆ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಸರ್ಕಾರಿ ಸ್ವಾಮ್ಯದ ಆಕಾಶವಾಣಿ ಭವನದ ಆವರಣಕ್ಕೆ ಬಲವಂತವಾಗಿ ಮತ್ತು ಅನಧಿಕೃತವಾಗಿ ನುಗ್ಗಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ 260 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಪ್ರತಿಪಕ್ಷ ಸಂಸದರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ‘ಮತ ಕಳ್ಳತನ’ದ ಆರೋಪವನ್ನೂ ಅವರು ಮುಂದಿಟ್ಟಿದ್ದರು.

ದೆಹಲಿ ಪೊಲೀಸರ ಪ್ರಕಾರ, ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮಂಗಳವಾರ ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದ್ದವು. ಆದರೆ, ಪಾದಯಾತ್ರೆಗೆ ಅನುಮತಿ ಕೋರಿ ನವದೆಹಲಿಯ ಪೊಲೀಸ್ ಉಪ ಆಯುಕ್ತರ ಕಚೇರಿಗೆ ಯಾವುದೇ ಅರ್ಜಿ ಸಲ್ಲಿಸಲಾಗಿರಲಿಲ್ಲ. ಹೀಗಾಗಿ ಮೆರವಣಿಗೆಗೆ ಯಾವುದೇ ಅನುಮತಿ ನೀಡಲಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.