ರೇಣುಕಾಸ್ವಾಮಿ ಹತ್ಯೆ ಕೇಸು: ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಶಾಕ್
ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ.
ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.
ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯಲಕ್ಷ್ಮೀ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಜೆ.ಬಿ ಪಾರ್ದಿವಾಲ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿ ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್ ನಿಲುವು ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ವಿಜಯಲಕ್ಷ್ಮಿ ಪರ ಹಿರಿಯ ವಕೀಲ ನಾಗಮುತ್ತು ವಾದ ಮಂಡಿಸಿದರು, ಮಾಫಿ ಸಾಕ್ಷಿಯನ್ನು ಪರಿಗಣಿಸುವ ಅಧಿಕಾರ ಪ್ರಿನ್ಸಿಪಲ್ ಕೋರ್ಟ್‌ಗೆ ಮಾತ್ರ ಇದೆ ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮಾಫಿ ಸಾಕ್ಷಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಬೇರೆ ಯಾವುದೇ ಕಾನೂನು ಅಂಶಗಳಿದ್ದರೆ ಆ ಕುರಿತು ವಾದ ಮಂಡಿಸುವಂತೆ ಪೀಠ ಸೂಚಿಸಿತು. ಟ್ರಯಲ್ ಕೋರ್ಟ್‌ಗೆ ಅಧಿಕಾರ ಇಲ್ಲ ಎಂಬ ವಿಚಾರವನ್ನೇ ಮುಂದಿಟ್ಟುಕೊಂಡು ವಾದಿಸುವ ಬದಲು, ಅದಕ್ಕಿಂತ ಪರಿಣಾಮಕಾರಿ ಕಾನೂನು ಅಂಶಗಳಿದ್ದರೆ ಅವುಗಳನ್ನು ಮಂಡಿಸುವಂತೆ ನ್ಯಾಯಮೂರ್ತಿ ಪರ್ದಿವಾಲಾ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



