ದೇಶ

CJP ಪ್ರತಿಭಟನೆಗೆ ದೆಹಲಿಯಲ್ಲಿ ಭಾರೀ ಭದ್ರತೆ: ಇದು ಮೋದಿ ಸರ್ಕಾರದ 'ಭಯ, ಆತಂಕ'ಕ್ಕೆ ಸಾಕ್ಷಿ- ಕಾಂಗ್ರೆಸ್

ಕಾಕ್‌ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೆ ಮುನ್ನ ದೆಹಲಿಯಾದ್ಯಂತ 20,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

CJP ಪ್ರತಿಭಟನೆಗೆ ದೆಹಲಿಯಲ್ಲಿ ಭಾರೀ ಭದ್ರತೆ: ಇದು ಮೋದಿ ಸರ್ಕಾರದ 'ಭಯ, ಆತಂಕ'ಕ್ಕೆ ಸಾಕ್ಷಿ- ಕಾಂಗ್ರೆಸ್
ಜೈರಾಮ್ ರಮೇಶ್ — online desk
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಗೂ ಮುನ್ನ ಕೇಂದ್ರ ಸರ್ಕಾರ ಕೈಗೊಂಡಿರುವ ಭಾರಿ ಭದ್ರತಾ ವ್ಯವಸ್ಥೆಯು, ನರೇಂದ್ರ ಮೋದಿ ಸರ್ಕಾರದ ‘ಭೀತಿ ಮತ್ತು ಆತಂಕ’ವನ್ನು ಎದ್ದಿ ತೋರಿಸುತ್ತದೆ ಎಂದು ಶುಕ್ರವಾರ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಅಕ್ಟೋಬರ್ 10ರಂದು ನಡೆಯಲಿರುವ ಕಾಕ್‌ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೆ ಮುನ್ನ ದೆಹಲಿಯಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದು ಮೋದಿ ಸರ್ಕಾರದಲ್ಲಿ ಉಂಟಾಗಿರುವ ‘ಭಯ ಮತ್ತು ಆತಂಕವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಸ್ಪಷ್ಟವಾಗಿ ಭಯ ಮತ್ತು ಆತಂಕದ ಮಟ್ಟವನ್ನು ತೋರಿಸುತ್ತದೆ. ಇಂಡಿಯಾ ಮೈತ್ರಿಕೂಟ ಸತತ ನಾಲ್ಕು ದಿನಗಳ ಕಾಲ ನಿರಂತರವಾಗಿ ನಡೆಸಿದ ಪ್ರತಿಭಟನೆಗಳ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಾಕ್‌ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೆ ಮುನ್ನ ದೆಹಲಿಯಾದ್ಯಂತ 20,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿಲ್ಲ. ಹೀಗಾಗಿ ಅನುಮತಿಯಿಲ್ಲದ ಸಭೆ ಅಥವಾ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಶಾಂತಿ ಕದಡುವ ಘಟನೆಗಳನ್ನು ತಡೆಯಲು ಹಾಗೂ ಜನರು ಮತ್ತು ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಬಂಧಪಟ್ಟ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಯಲ್ಲಿದೆ ಎಂದೂ ಹೇಳಿದ್ದಾರೆ.

ಪ್ರತಿಭಟನಾಕಾರರು ಮತ್ತು ಸಾರ್ವಜನಿಕರು ಯಾವುದೇ ರೀತಿಯ ಹಿಂಸಾಚಾರದಲ್ಲಿ ತೊಡಗಬಾರದು ಹಾಗೂ ಭದ್ರತಾ ಕರ್ತವ್ಯದಲ್ಲಿರುವ ಪೊಲೀಸರ ಮೇಲೆ ದಾಳಿ ನಡೆಸಬಾರದು.

ಮಹಿಳಾ ಪ್ರತಿಭಟನಾಕಾರರನ್ನು ನಿರ್ವಹಿಸುವ ಕುರಿತು ಭದ್ರತಾ ಸಿಬ್ಬಂದಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಅನಗತ್ಯ ಸಂಘರ್ಷಕ್ಕೆ ಅವಕಾಶ ಮಾಡಿಕೊಡದಂತೆಯೂ ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣಗಳು ಸೇರಿದಂತೆ ಯಾವುದೇ ವೇದಿಕೆಯಲ್ಲಿ ಹರಿದಾಡುವ ದೃಢೀಕರಿಸದ ಮಾಹಿತಿಯನ್ನು ನಂಬಬಾರದು ಅಥವಾ ಹಂಚಿಕೊಳ್ಳಬಾರದು ಎಂದೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.