ದೇಶ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ; ರೋಚಕ Video

ಮಹಾರಾಷ್ಟ್ರದ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ಮರಳು ತುಂಬಿದ ಭಾರೀ ಡಂಪರ್‌ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಅಪಾಯಕಾರಿ ಪರಿಸ್ಥಿತಿಗೆ ಸಿಲುಕಿದ ಘಟನೆ ನಡೆದಿದೆ.

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ; ರೋಚಕ Video
ಲಾರಿ ಬಂಪರ್ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ
Published On :

ಮುಂಬೈ: ತನನ್ನು ಗುದ್ದಿದ ಲಾರಿಯನ್ನೇ ಹಿಡಿದುಕೊಂಡು ಪ್ರಾಣ ಉಳಿಸಿಕೊಂಡ ಯುವತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಮಹಾರಾಷ್ಟ್ರದ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ಮರಳು ತುಂಬಿದ ಭಾರೀ ಡಂಪರ್‌ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಅಪಾಯಕಾರಿ ಪರಿಸ್ಥಿತಿಗೆ ಸಿಲುಕಿದ ಘಟನೆ ನಡೆದಿದೆ.

ಆದರೆ, ಕೊನೆಯ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ ಯುವತಿ, ಡಂಪರ್‌ನಡಿ ಸಿಲುಕುವುದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಳೆ.

ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಲಾರಿ ಬಂಪರ್ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ

ವೈರಲ್‌ ಆಗಿರುವ ಸಿಸಿಟಿವಿ ದೃಶ್ಯಗಳ ಪ್ರಕಾರ, ಯುವತಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಮರಳು ತುಂಬಿದ ಡಂಪರ್‌ ಆಕೆಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಯುವತಿಯ ಜೀವಕ್ಕೆ ಅಪಾಯ ಎದುರಾಗಿದೆ.

ಈ ವೇಳೆ ಕ್ಷಣಾರ್ಧದಲ್ಲಿ ಎಚ್ಚೆತ್ತುಕೊಂಡ ಯುವತಿ, ಡಂಪರ್‌ನ ಬಂಪರ್‌ ಹಿಡಿದುಕೊಂಡಿದ್ದಾಳೆ. ಇದರಿಂದ ಭಾರೀ ವಾಹನದ ಚಕ್ರಗಳಡಿ ಸಿಲುಕುವ ಅಪಾಯದಿಂದ ಪಾರಾಗಿದ್ದಾಳೆ.

ಯುವತಿ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ

ಅಪಘಾತದ ಭೀಕರತೆ ಮತ್ತು ಕೊನೆಯ ಕ್ಷಣದಲ್ಲಿ ಯುವತಿ ತೋರಿದ ಸಮಯಪ್ರಜ್ಞೆ ಕಂಡು ವೀಕ್ಷಕರು ಬೆರಗಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದ್ದು, ಹಲವರು ಯುವತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ರಸ್ತೆಗಳಲ್ಲಿ ಸಂಚರಿಸುವ ಭಾರೀ ವಾಹನಗಳಿಂದ ಉಂಟಾಗಬಹುದಾದ ಅಪಾಯಗಳನ್ನು ಈ ಘಟನೆ ಮತ್ತೊಮ್ಮೆ ಎತ್ತಿತೋರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.