ದೇಶ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ.

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ
ಕಾಕ್‌ರೋಚ್ ಜನತಾ ಪಕ್ಷದ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ
Published On :

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತೀವ್ರವಾಗಿ ಖಂಡಿಸಿದ್ದಾರೆ.

ನಿಮಗೆ ದೇಶದ ಯುವಶಕ್ತಿಯನ್ನು ಕಂಡು ಅಷ್ಟೊಂದು ಭಯವಿದ್ದರೆ, ಕೇವಲ ದೆಹಲಿಯನ್ನಷ್ಟೇ ಏಕೆ, ಇಡೀ ದೇಶವನ್ನೇ ಬಂದ್ ಮಾಡಿ ಎಂದು ಕಿಡಿಕಾರಿದ್ದಾರೆ.

ಶನಿವಾರ ಜಂತರ್ ಮಂತರ್‌ನಲ್ಲಿ ಸಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಒಂದು ದಿನ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ, ನೀವು ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ. ಆದರೆ, ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿಯನ್ನೂ ನಿರಾಕರಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ದೀಪ್ಕೆ, ಜಂತರ್ ಮಂತರ್ ಪ್ರತಿಭಟನೆಗಳಿಗೆ ನಿಗದಿಪಡಿಸಿರುವ ಸ್ಥಳವಾಗಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಸರ್ಕಾರದ ಅನುಮತಿ ಪಡೆಯುವ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.

ಅಕ್ಟೋಬರ್ 10ರಂದು ಬೆಳಿಗ್ಗೆ 4ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಆಗಮಿಸಬೇಕಿದ್ದ ಆಯ್ದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳನ್ನು ರೈಲ್ವೆ ಮಂಡಳಿ ರದ್ದುಗೊಳಿಸಿದ ಬೆನ್ನಲ್ಲೇ ದೀಪ್ಕೆ ಈ ಹೇಳಿಕೆ ನೀಡಿದ್ದಾರೆ.

ಎರಡೂ ರೈಲು ನಿಲ್ದಾಣಗಳ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇದೇ ವೇಳೆ, ಪ್ರತಿಭಟನೆಗಾಗಿ ದೆಹಲಿಗೆ ಆಗಮಿಸುವ ನಿರೀಕ್ಷೆಯಿರುವ ಯುವಕರ ಸಂಚಾರವನ್ನು ನಿಯಂತ್ರಿಸುವ ಉದ್ದೇಶದಿಂದ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷಗಳು, ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.