ದೇಶ

ಅಭಿಜೀತ್ ದೀಪ್ಕೆಯನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅಜ್ಜಿ ಸಾವು! ವಯೋಸಹಜ ಕಾಯಿಲೆಗಳಿಂದ ಸಾವಿತ್ರಿಬಾಯಿ ದೀಪ್ಕೆ ನಿಧನ

ಮುಂಬೈನಿಂದ ದೆಹಲಿಗೆ ಬಂದಿಳಿದ ಅಭಿಜೀತ್ ದೀಪ್ಕೆ ಅವರನ್ನು ವಿಮಾನದ ಒಳಗಡೆಯೇ ದೆಹಲಿ ಪೊಲೀಸರು ವಶಕ್ಕೆ ಪಡೆದ ಕೆಲವೇ ಗಂಟೆಗಳಲ್ಲಿ, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ (85) ಅವರು ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಅಭಿಜೀತ್ ದೀಪ್ಕೆಯನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅಜ್ಜಿ ಸಾವು! ವಯೋಸಹಜ ಕಾಯಿಲೆಗಳಿಂದ ಸಾವಿತ್ರಿಬಾಯಿ ದೀಪ್ಕೆ ನಿಧನ
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಖ್ಯಸ್ಥ ಅಭಿಜೀತ್ ದೀಪ್ಕೆ — Online Desk
Published On :

ಹಿಂಗೋಲಿ (ಮಹಾರಾಷ್ಟ್ರ): ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂಬೈನಿಂದ ದೆಹಲಿಗೆ ಬಂದಿಳಿದ ಅಭಿಜೀತ್ ದೀಪ್ಕೆ ಅವರನ್ನು ವಿಮಾನದ ಒಳಗಡೆಯೇ ದೆಹಲಿ ಪೊಲೀಸರು ವಶಕ್ಕೆ ಪಡೆದ ಕೆಲವೇ ಗಂಟೆಗಳಲ್ಲಿ ದುಃಖದ ಸಂಗತಿ ಸಂಭವಿಸಿದೆ. ಅದರಂತೆ, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ (85) ಅವರು ಶನಿವಾರ ಮುಂಜಾನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ತಮ್ಮ ಸ್ವಗ್ರಾಮವಾದ ಸಂತುಕ್ ಪಿಂಪ್ರಿಯಲ್ಲಿ ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ತಮ್ಮ ಸ್ವಗ್ರಾಮವಾದ ಸಂತುಕ್ ಪಿಂಪ್ರಿಯಲ್ಲಿ, ಸಾವಿತ್ರಿಬಾಯಿಯವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಅಭಿಜೀತ್ ದೀಪ್ಕೆ ಪೋಷಕರಾದ ಭಗವಾನ್ ದೀಪ್ಕೆ ಮತ್ತು ಅನಿತಾ ಸದ್ಯ ಛತ್ರಪತಿ ಸಂಭಾಜಿನಗರದಲ್ಲಿದ್ದಾರೆ. ಅದರಂತೆ, ತಾಯಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಿಂಗೋಲಿಯತ್ತ ಪ್ರಯಾಣ ಬೆಳೆಸಿದ್ದು, ಇತ್ತ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಭಾಜಿನಗರದ ಎಂಐಡಿಸಿ ವಾಲುಜ್ ಪ್ರದೇಶದಲ್ಲಿರುವ ದೀಪ್ಕೆ ನಿವಾಸಕ್ಕೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಏತನ್ಮಧ್ಯೆ, ಕಳೆದ ಒಂದು ವಾರದಿಂದ ಮುಂಬೈ ಹಾಗೂ ದೆಹಲಿ ಚಳವಳಿಯಲ್ಲೇ ನಿರತರಾಗಿದ್ದ ಅಭಿಜೀತ್, ಕೇವಲ ಫೋನ್ ಮೂಲಕವಷ್ಟೇ ಕುಟುಂಬದ ಸಂಪರ್ಕದಲ್ಲಿದ್ದರು. ಪ್ರಸ್ತುತ ಅವರು ದೆಹಲಿ ಪೊಲೀಸರ ಕಸ್ಟಡಿಯಲ್ಲಿ ಇರುವುದರಿಂದ, ಅಜ್ಜಿಯ ಸಾವಿನ ವಿಚಾರ ಅವರಿಗೆ ತಲುಪಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.