CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು
ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ(ಎಐಎಸ್ಎ) ಅಧ್ಯಕ್ಷೆ ನೇಹಾ ಬೋರಾ, ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ಐಎನ್ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದರು.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಅವರ ಪಕ್ಷದ ನಾಯಕರಾದ ಡೆರೆಕ್ ಒ'ಬ್ರೇನ್, ಡೋಲಾ ಸೇನ್ ಮತ್ತು ಇತರರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ(ಎಐಎಸ್ಎ) ಅಧ್ಯಕ್ಷೆ ನೇಹಾ ಬೋರಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಲೆನಿನಿಸ್ಟ್-ಲಿಬರೇಶನ್ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ, ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ಐಎನ್ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದರು.
ಏತನ್ಮಧ್ಯೆ, ಖಾನ್ ಮಾರುಕಟ್ಟೆ ಮತ್ತು ಕನ್ನಾಟ್ ಪ್ಲೇಸ್ ಸೇರಿದಂತೆ ರಾಷ್ಟ್ರ ರಾಜಧಾನಿಯಾದ್ಯಂತ ಹಲವಾರು ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆ.
ಖಾನ್ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಂಜೀವ್ ಮೆಹ್ರಾ ಮಾತನಾಡಿ, ಪ್ರತಿಭಟನಾಕಾರರು ಆಸ್ತಿಗೆ ಹಾನಿ ಮಾಡುವ ಭಯದಿಂದ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಸ್ವಯಂಪ್ರೇರಣೆಯಿಂದ ಬಂದ್ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



