ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್ ಮುಖ್ಯಸ್ಥ ಕರೆ
ಸಿಇಸಿ ವಿರುದ್ಧದ ಸಿಜೆಪಿ ನೇತೃತ್ವದ ಪ್ರತಿಭಟನೆಯಿಂದ ದೂರವಿರುವಂತೆ ಪ್ರಮುಖ ಮುಸ್ಲಿಂ ಧರ್ಮಗುರುಯೊಬ್ಬರು ತಮ್ಮ ಸಮುದಾಯದ ಜನತೆಗೆ ಕರೆ ನೀಡಿದ್ದಾರೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಈ ಮಧ್ಯೆ, ಸಿಇಸಿ ವಿರುದ್ಧದ ಸಿಜೆಪಿ ನೇತೃತ್ವದ ಪ್ರತಿಭಟನೆಯಿಂದ ದೂರವಿರುವಂತೆ ಪ್ರಮುಖ ಮುಸ್ಲಿಂ ಧರ್ಮಗುರುಯೊಬ್ಬರು ತಮ್ಮ ಸಮುದಾಯದ ಜನತೆಗೆ ಕರೆ ನೀಡಿದ್ದಾರೆ. ಅಲ್ಲದೆ ಮುಸ್ಲಿಮರು ರಾಜಕೀಯ ಉದ್ದೇಶಗಳಿಗಾಗಿ ತಮ್ಮನ್ನು "ಬಳಸಿಕೊಳ್ಳುವುದಕ್ಕೆ" ಅವಕಾಶ ನೀಡಬಾರದು ಎಂದು ಎಚ್ಚರಿಸಿದ್ದಾರೆ.
ಆಲ್ ಇಂಡಿಯಾ ಇಮಾಮ್ ಸಂಘದ ಮುಖ್ಯ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ, ಮುಸ್ಲಿಮರು, ವಿಶೇಷವಾಗಿ ಮಸೀದಿ ಇಮಾಮ್ಗಳು, ಪ್ರಸ್ತಾವಿತ ಪ್ರತಿಭಟನೆಗಳಿಂದ ದೂರವಿರುವಂತೆ ಮನವಿ ಮಾಡಿದ್ದಾರೆ.
ಕೆಲವು ಶಕ್ತಿಗಳು "ದೇಶದಲ್ಲಿ ಶಾಂತಿಯನ್ನು ಕದಡಲು" ಪ್ರಯತ್ನಿಸುತ್ತಿವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಆರೋಪಿಸಿದ್ದಾರೆ.
"ನಾನು ಎಲ್ಲಾ ಮುಸ್ಲಿಮರಿಗೆ, ವಿಶೇಷವಾಗಿ ಮಸೀದಿಗಳ ಇಮಾಮ್ಗಳಿಗೆ ಒಂದು ಮನವಿ ಮತ್ತು ವಿನಂತಿಯನ್ನು ಮಾಡುತ್ತಿದ್ದೇನೆ. ಪ್ರಸ್ತುತ ದೇಶದಲ್ಲಿ ಪರಿಸ್ಥಿತಿ ಯಾವ ರೀತಿ ಎಂದು ನಿಮಗೆ ತಿಳಿದಿದೆ. ಕೆಲವು ದೇಶವಿರೋಧಿ ಶಕ್ತಿಗಳು ನಮ್ಮ ದೇಶದಲ್ಲಿ ಶಾಂತಿಯನ್ನು ಹಾಳು ಮಾಡಲು ಬಯಸುತ್ತಿವೆ" ಎಂದು ಇಲ್ಯಾಸಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
"ನಾನು ಎಲ್ಲಾ ಮುಸ್ಲಿಮರಿಗೆ ಹೇಳಬಯಸುತ್ತೇನೆ, ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಯಾವ ರಾಜಕೀಯ ಪಕ್ಷಗಳು ಕರೆ ನೀಡಿವೆಯೋ ಮತ್ತು ಆ ಕರೆಯನ್ನು ನೀಡಿದ ರೀತಿಯನ್ನು ಗಮನಿಸಿದರೆ, ಈ ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ನಡೆಸಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಮುಸ್ಲಿಮರೇ, ನಾವು ಕೇವಲ ಬಳಸಿಕೊಳ್ಳುವಂತಹ ವಸ್ತುಗಳಲ್ಲ ಎಂಬುದನ್ನು ನಾನು ನಿಮಗೆ ನೆನಪಿಸಲು ಬಯಸುತ್ತೇನೆ" ಎಂದು ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಸೂಚ್ಯವಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



